





ಪುತ್ತೂರು:ದ.ಕ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು , ಪ್ರಿಯದರ್ಶಿನಿ ಆಂಗ್ಲ ಮಾಧ್ಯಮ ಶಾಲೆ ಬೆಟ್ಟಂಪಾಡಿ ಇವರ ಸಂಯುಕ್ತ ಆಶ್ರಯದಲ್ಲಿ 2025- 26ನೇ ಸಾಲಿನ ಪುತ್ತೂರು ಮತ್ತು ಕಡಬ ಶೈಕ್ಷಣಿಕ ವಲಯದ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕರ ಹಾಗೂ ಬಾಲಕಿಯರ ಕ್ರೀಡಾಕೂಟದಲ್ಲಿ ಪ್ರಾಥಾಮಿಕ ಶಾಲಾ ಬಾಲಕರ ವಿಭಾಗದಲ್ಲಿ ಮಹಮ್ಮದ್ ರಿಹಾನ್ (8ನೇ) ಗುಂಡು ಎಸೆತದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.


ಮಹಮ್ಮದ್ ರಿಯಾನ್(8ನೇ) ಚಕ್ರ ಎಸೆತದಲ್ಲಿ ತೃತೀಯ ಸ್ಥಾನ ಪಡೆದಿರುತ್ತಾರೆ. ಪ್ರೌಢಶಾಲಾ ಬಾಲಕರ ವಿಭಾಗದಲ್ಲಿ ಗಗನ್ ಎ (10ನೇ), 100 ಮೀಟರ್ ಓಟ ಹಾಗೂ 200 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಹಾಗೂ 4* 400 ಮೀಟರ್ ರಿಲೇ ಸ್ಪರ್ಧೆಯಲ್ಲಿ ಗಗನ್ ಎ ಜಿ(10 ನೇ), ಅಖಿಲ್ ವಿ ಗೌಡ(10 ನೇ), ಅಭಿನ್ ಎಸ್ ರೈ(10 ನೇ), ಮನೀಶ್ ಯು ಶೆಟ್ಟಿ(10 ನೇ), ಇವರು ಸ್ಪರ್ಧಿಸಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.





ಇವರನ್ನು ಶಾಲಾ ಸಂಚಾಲಕರಾದ ರೆ. ವಿಜಯ ಹಾರ್ವಿನ್, ಮುಖ್ಯ ಶಿಕ್ಷಕಿ ಶೋಭಾ ನಾಗರಾಜ್ ಮತ್ತು ದೈಹಿಕ ಶಿಕ್ಷಣ ಶಿಕ್ಷಕರು ಅಭಿನಂದಿಸಿ, ಶುಭಹಾರೈಸಿದ್ದಾರೆ.









