ಇಳಂತಿಲ: ವಿದ್ಯಾರ್ಥಿನಿ ಆತ್ಮಹತ್ಯೆ

0

ಪುತ್ತೂರು: ಇಳಂತಿಲ ಗ್ರಾಮದ ಪಾರಡ್ಕ ನಿವಾಸಿ ಶ್ರೀಧರ್ ಕುಂಬಾರ‌ ಎಂಬವರ ಪುತ್ರಿ ಹರ್ಷಿತಾ ಎಂಬಾಕೆ ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

ಘಟನೆಯ ವಿವರ:

ಶ್ರೀಧರ್ ಕುಂಬಾರ ಅವರ ಪುತ್ರಿ ಹರ್ಷಿತಾ(15 ವ) ಎಂಬಾಕೆ ಉಪ್ಪಿನಂಗಡಿ ಪ್ರೌಢ ಶಾಲೆಯಲ್ಲಿ 10ನೇ ತರಗತಿಯಲ್ಲಿ ಓದುತ್ತಿದ್ದಳು. ನ. 4ರಂದು ತಲೆನೋವು ಎಂದು ಹೇಳಿ ಶಾಲೆಗೆ ಹೋಗದೆ ಬೆಳ್ತಂಗಡಿ ತಾಲೂಕು ಇಳಂತಿಲ ಗ್ರಾಮದ ಪಾರಡ್ಕ ಎಂಬಲ್ಲಿರುವ ತಮ್ಮ ಮನೆಯಲ್ಲಿದ್ದವಳು ಮನೆಯಲ್ಲಿ ತಂದಿಟ್ಟಿದ್ದ ಹುಲ್ಲಿಗೆ ಸಿಂಪಡಿಸುವ ಕೀಟನಾಶಕ ಸೇವಿಸಿ ಅಸ್ವಸ್ಥಗೊಂಡಿದ್ದಳು. ವಿಷಯ ತಿಳಿದು ಕೂಲಿ ಕೆಲಸಕ್ಕೆ ಹೋಗಿದ್ದ ಧರ್ಣಪ್ಪ ಕುಂಬಾರ ಅವರ ಪತ್ನಿ ಗೀತಾರವರು ಮನೆಗೆ ಬಂದು ಒಂದು ಅಟೋ ರಿಕ್ಷಾದಲ್ಲಿ ಹರ್ಷಿತಾಳನ್ನು ಚಿಕಿತ್ಸೆ ಬಗ್ಗೆ ಪುತ್ತೂರು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆ ಬಗ್ಗೆ ಆಂಬ್ಯುಲೆನ್ಸ್ ನಲ್ಲಿ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಧರ್ಣಪ್ಪ ಕುಂಬಾರ ಅವರು ಕೂಡಲೇ ಹೊರಟು ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ಹೋಗಿ ಆಸ್ಪತ್ರೆಯ ತುರ್ತುನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಗಳನ್ನು ನೋಡಿದ್ದರು‌. ಆ ವೇಳೆ ಆಕೆ ಮಾತನಾಡುವ ಸ್ಥಿತಿಯಲ್ಲಿ ಇರಲಿಲ್ಲ. ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಹರ್ಷಿತಾ ನ.12ರಂದು 1 ಗಂಟೆಗೆ ಮೃತಪಟ್ಟಿರುತ್ತಾಳೆ. ಹರ್ಷಿತಾಳಿಗೆ ಕಡಬದ ರಾಜೇಶ್ ಎಂಬಾತನು ಫೋನ್ ಮಾಡಿ ಕಿರುಕುಳ ನೀಡಿರುವ ಸಾಧ್ಯತೆ ಇರುವುದರಿಂದ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಸಂಶಯ ಇರುತ್ತದೆ. ಅವಳ ಸಾವಿನಲ್ಲಿ ಬೇರೆ ಯಾವುದೇ ಸಂಶಯ ಅಥವಾ ಕಾರಣ ತಿಳಿದಿರುವುದಿಲ್ಲ ಎಂದು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

LEAVE A REPLY

Please enter your comment!
Please enter your name here