





ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯು ತನ್ನ ಬೆಳ್ಳಿಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಪಂಚವಿಂಶತಿ-25 ಎನ್ನುವ ಸರಣಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಇದರನ್ವಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಅಂತರ್‌ಜಿಲ್ಲಾ ಚೆಸ್ ಪಂದ್ಯಾಟವನ್ನು ಏರ್ಪಡಿಸಲಾಗಿದೆ.


ನವಂಬರ್ 15ರಂದು ಕಾಲೇಜಿನ ಆವರಣದಲ್ಲಿ ಈ ಸ್ಪರ್ಧೆಯು ನಡೆಯಲಿದೆ. ದಕ್ಷಿಣಕನ್ನಡ, ಉಡುಪಿ, ಕೊಡಗು, ಹಾಸನ, ಉತ್ತರಕನ್ನಡ, ಚಿಕ್ಕಮಗಳೂರು ಹಾಗೂ ಕಾಸರಗೋಡು ಜಿಲ್ಲೆಗಳ ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸುತ್ತಾರೆ. ಇದುವರೆಗೆ ಸುಮಾರು 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಒಂದು ತಂಡದಲ್ಲಿ 5 ವಿಧ್ಯಾರ್ಥಿಗಳು ಭಾಗವಹಿಸಬಹುದಾಗಿದ್ದು, ವೈಯಕ್ತಿಕ ಹಾಗೂ ತಂಡ ಪ್ರಶಸ್ತಿಯನ್ನು ನೀಡಲಾಗುತ್ತದೆ. ವಿಜೇತರಿಗೆ ಆಕರ್ಷಕ ನಗದು ಬಹುಮಾನ ಹಾಗೂ ಟ್ರೋಫಿಯನ್ನು ನೀಡಿ ಗೌರವಿಸಲಾಗುತ್ತದೆ.
ಅಂದು ಬೆಳಿಗ್ಗೆ 10 ಗಂಟೆಗೆ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಮಂಗಳೂರಿನ ಗೋರಿಗುಡ್ಡೆಯ ಕಿಟ್ಟೆಲ್ ಮೆಮೋರಿಯಲ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಠ್ಠಲ.ಎ ಪಂದ್ಯಾಟಕ್ಕೆ ಚಾಲನೆ ನೀಡಲಿದ್ದಾರೆ. ಕಾಲೇಜು ಆಡಳಿತ ಮಂಡಳಿಯ ಸಂಚಾಲಕ ಸುಬ್ರಮಣ್ಯ ಭಟ್.ಟಿ.ಎಸ್ ಅಧ್ಯಕ್ಷತೆ ವಹಿಸಲಿದ್ದಾರೆ.





ಪ್ರಾಂಶುಪಾಲ ಡಾ.ಮಹೇಶ್‌ಪ್ರಸನ್ನ.ಕೆ ಅವರ ಮಾರ್ಗದರ್ಶನದಲ್ಲಿ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಅವರ ಮುಂದಾಳುತ್ವದಲ್ಲಿ ಪಂದ್ಯಾಟಕ್ಕೆ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ.








