ವಿವೇಕಾನಂದ ಪ.ಪೂ. ಕಾಲೇಜಿನಲ್ಲಿ ಕನಕದಾಸ ಜಯಂತಿ ಆಚರಣೆ

0

ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ದಾಸಶ್ರೇಷ್ಠ ಕನಕದಾಸರ ಜಯಂತಿಯ ಪ್ರಯುಕ್ತ ಅವರ ಭಾವಚಿತ್ರಕ್ಕೆ ಪುಷ್ಪನಮನವನ್ನು ಸಲ್ಲಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ದೇವಿಚರಣ್ ರೈ. ಎಂ ಪುಷ್ಪ ನಮನವನ್ನು ಸಲ್ಲಿಸಿ, ಮಾತನಾಡುತ್ತಾ “ದಾಸಶ್ರೇಷ್ಠರೆಂದೇ ಹೆಸರುವಾಸಿಯಾಗಿರುವ ಕನಕದಾಸರು ನಮ್ಮ ಪರಂಪರೆಯ ನೈತಿಕ ಹಾಗೂ ಆಧ್ಯಾತ್ಮಿಕ ಶಕ್ತಿಯಾಗಿದ್ದಾರೆ.

ಕನಕದಾಸರ ಜೀವನ ತತ್ವಗಳು, ಬೋಧನೆಗಳು ಹಾಗೂ ಕೀರ್ತನೆಗಳು ಇಂದಿಗೂ ಲಕ್ಷಾಂತರ ಜನರಿಗೆ ಮಾರ್ಗದರ್ಶನ ಹಾಗೂ ಸ್ಫೂರ್ತಿಯನ್ನು ನೀಡುತ್ತಿದೆ. ಭಕ್ತಿ ಮಾರ್ಗದಿಂದ ದೇವರನ್ನು ಒಲಿಸಿಕೊಳ್ಳಬಹುದು ಎಂಬುದಕ್ಕೆ ಕನಕದಾಸರೇ ಸಾಕ್ಷಿ ಎಂದು ನುಡಿದರು.
ಈ ಸಂದರ್ಭದಲ್ಲಿ ಕಾಲೇಜಿನ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಉಪಸ್ಥಿತರಿದ್ದು, ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಅರ್ಪಿಸಿದರು.

LEAVE A REPLY

Please enter your comment!
Please enter your name here