ಪುತ್ತೂರು: ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲದಲ್ಲಿ ಶಾಂತಿವನ ಟ್ರಸ್ಟ್ ವತಿಯಿಂದ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳನ್ನು ನ.11ರಂದು ನಡೆಸಲಾಯಿತು.
ಕಾರ್ಯಕ್ರಮವನ್ನು ಪುತೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ಶಕುಂತಲಾ ಟಿ ಶೆಟ್ಟಿ ಉದ್ಘಾಟಿಸಿ ಶುಭಹಾರೈಸಿದರು. ಮುಖ್ಯ ಅತಿಥಿಗಳಾಗಿ ಪುತ್ತೂರು ಶಿಕ್ಷಣಾಧಿಕಾರಿ ವಿಷ್ಣುಪ್ರಕಾಶ್ ಮತ್ತು ಕೈಕಾರ ಸಹ್ಯಾದ್ರಿ ಯುವಕ ಮಂಡಲದ ಗೌರವಾಧ್ಯಕ್ಷ ಪ್ರಜ್ವಲ್ ರೈ ಕೈಕಾರ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಕಾರ್ಯಕ್ರಮದಲ್ಲಿ ಮಾಜಿ ಶಾಸಕಿ ಶಕುಂತಲಾ ಶೆಟ್ಟಿಯವರನ್ನು ಗೌರವಿಸಲಾಯಿತು.

ಶಾಂತಿವನ ಟ್ರಸ್ಟ್ ಧರ್ಮಸ್ಥಳ ನಿರ್ದೇಶಕ ಶಶಿಕಾಂತ್ ಜೈನ್ ಇವರು ಪ್ರಾಸ್ತಾವಿಕ ನುಡಿಗಳನ್ನಾಡಿದರು.ಮಕ್ಕಳ ಸಾಹಿತಿ ನಾರಾಯಣ ರೈ ಕುಕ್ಕುವಳ್ಳಿ, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ ಇದರ ಮುಖ್ಯಗುರು ಸತೀಶ್ ಕುಮಾರ್ ರೈ ಮತ್ತು ಬಿ.ಎಡ್ ಪ್ರಾಂಶುಪಾಲೆ ಡಾ.ಶೋಭಿತಾ ಸತೀಶ್ ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷ ಡಾ.ಶಿವಪ್ರಕಾಸ್.ಎಂ ಅಧ್ಯಕ್ಷೀಯ ನೆಲೆಯಲ್ಲಿ ಮಾತನಾಡಿದರು. ಕೈಕಾರ ಶಾಲೆಯ ಮುಖ್ಯಗುರು ರಾಮಣ್ಣ ರೈ ಸ್ವಾಗತಿಸಿ, ವಂದಿಸಿದರು. ಸ್ವಾನಿ.ಡಿ, ಮೇಘ ಮತ್ತು ಅಹನ ಪ್ರಾರ್ಥಿಸಿದರು. ಸಹಶಿಕ್ಷಕಿ ಯಶೋಧ.ಕೆ ಕಾರ್ಯಕ್ರಮ ನಿರೂಪಿಸಿ, ಸಹಶಿಕ್ಷಕಿ ಲತಾ ಕುಮಾರಿ ಸಹಕರಿಸಿದರು.