ಸುಳ್ಯ ಅಲ್ಪಸಂಖ್ಯಾತರ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರಿ ಸಂಘದ ಚುನಾವಣೆ – ನಿರ್ದೇಶಕರಾಗಿ ಅಬ್ದುಲ್ ರಹಿಮಾನ್ ಹಾಜಿ ಮೇನಾಲ ಆಯ್ಕೆ

0

ಪುತ್ತೂರು: ಅಲ್ಪಸಂಖ್ಯಾತರ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರಿ ಸಂಘ ಸುಳ್ಯ ಇದರ ಆಡಳಿತ ಮಂಡಳಿಯ ನಿರ್ದೇಶಕರಾಗಿ ಅಬ್ದುಲ್ ರಹಿಮಾನ್ ಹಾಜಿ ಮೇನಾಲ ಆಯ್ಕೆಯಾಗಿದ್ದಾರೆ.


ನ.೨ರಂದು ಗಾಂಧಿನಗರದ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ನಡೆದ ಮತದಾನದಲ್ಲಿ ಅಬ್ದುಲ್ ರಹಿಮಾನ್ ಹಾಜಿಯವರು 122 ಮತಗಳನ್ನು ಪಡೆದು ಗೆಲುವು ಸಾಧಿಸುವ ಮೂಲಕ ಸಂಘದ ನಿರ್ದೇಶಕರಾಗಿ ಆಯ್ಕೆಯಾದರು.

ಮೇನಾಲ ಮಧುರಾ ಇಂಟರ್‌ನ್ಯಾಶನಲ್ ಸ್ಕೂಲ್‌ನ ನಿರ್ದೇಶಕರಾಗಿರುವ ಅಬ್ದುಲ್ ರಹಿಮಾನ್ ಹಾಜಿಯವರು ಉದ್ಯಮ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದು ಸಾಮಾಜಿಕ, ಧಾರ್ಮಿಕ ಹಾಗೂ ರಾಜಕೀಯ ಕ್ಷೇತ್ರಗಳಲ್ಲಿ ಸಕ್ರಿಯರಾಗಿದ್ದಾರೆ.

LEAVE A REPLY

Please enter your comment!
Please enter your name here