





ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ (ಗ್ರಾ) ಇದರ ನೂತನ ಪದಾಧಿಕಾರಿಗಳ ನೇಮಕವಾಗಿದೆ. ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಸೌಮ್ಯ ರೆಡ್ಡಿ ಅವರ ಆದೇಶದ ಮೇರೆಗೆ ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಅಲ್ಕಾ ಲಂಬಾ ರವರ ನೇತೃತ್ವದಲ್ಲಿ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಆಯ್ಕೆ ಮಾಡಲಾಗಿದೆ.


ಮಹಿಳಾ ಸಮಿತಿ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಲವಿನ ವಿಲ್ಮಾ ಮೋರಸ್, ಜಿಲ್ಲಾ ಉಪಾಧ್ಯಕ್ಷರಾಗಿ ಮಲ್ಲಿಕಾ ವಿ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಭಾರತಿ ರಾಜೇಂದ್ರ, ಶೋಮಲಾ ಲೋಬೊ , ಜಿಲ್ಲಾ ಸಾಮಾಜಿಕ ಜಾಲತಾಣದ ಸಂಚಾಲಕರಾಗಿ ಶಬಾನಾ, ಜಿಲ್ಲಾ ಉಸ್ತುವಾರಿಯಾಗಿ ಕಾಂಚಲಾಕ್ಷಿ ಆಯ್ಕೆಯಾಗಿದ್ದಾರೆ. ಇವರಿಗೆ ಗ್ರಾಮೀಣ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಉಷಾ ಅಂಚನ್ ಶುಭ ಹಾರೈಸಿದ್ದಾರೆ.














