ಪುತ್ತೂರು : ವೀರಮಂಗಲ ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನ.15ರಂದು ಪಿಎಂಶ್ರೀ ಸಡಗರ 2025 ಕಾರ್ಯಕ್ರಮ ನಡೆಯಲಿದೆ. ಪೂರ್ವಾಹ್ನ 9.ಕ್ಕೆ ದ್ವಜಾರೋಹಣ, ಬಹುಮಾನ ವಿತರಣೆ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದೆ.
ಸಂಜೆ 4ಕ್ಕೆ ಸಭಾಕಾರ್ಯಕ್ರಮ ನಡೆಯಲಿದ್ದು, ಉದ್ಘಾಟನೆಯನ್ನು ಶಾಸಕ ಅಶೋಕ್ ಕುಮಾರ್ ರೈ ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ನರಿಮೊಗರು ಗ್ರಾಮ ಪಂಚಾಯತ್ ನರಿಮೊಗರು ಇದರ ಅಧ್ಯಕ್ಷೆ ಹರಿಣಿ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ನರಿಮೊಗರು ಗ್ರಾಮ ಪಂಚಾಯತ್ ಸದಸ್ಯರಾದ ಬಾಬು ಶೆಟ್ಟಿ, ವಸಂತಿ, ಪದ್ಮಾವತಿ, ಪುತ್ತೂರು ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ನವೀನ್ ಭಂಡಾರಿ, ಶಾಲಾ ಶಿಕ್ಷಣ ಇಲಾಖೆಯ ಕ್ಷೇತ್ರಶಿಕ್ಷಣಾಧಿಕಾರಿ ವಿಷ್ಣು ಪ್ರಸಾದ್ , ಸಮನ್ವಯಾಧಿಕಾರಿ ನವೀನ್ ವೇಗಸ್, ನಿವೃತ್ತ ರೈಲ್ವೆ ಇಂಜಿನಿಯರ್ ಗೋಪಕುಮಾರ್, ಶ್ರೀ ವಿಷ್ಣು ಮೂರ್ತಿದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶಿವರಾಮ ಭಟ್ ಬಾವಾ, ವೀರಮಂಗಲ ಮಸೀದಿಯ ಅಧ್ಯಕ್ಷ ರಝಾಕ್ ವಿ ಎಸ್, ಹಿರಿಯ ವಿದ್ತಾರ್ಥಿ ಸಂಘದ ಮಾಜಿ ಅಧ್ಯಕ್ಷ ದಾಮೋದರ ಕುಲಾಲ್ , ಆದಿ ಬ್ರಹ್ಮ ಮುಗರ್ಕೆಳ ದೈವಸ್ಥಾನದ ಅಧ್ಯಕ್ಷ ಬಾಬು ಪಳ್ಳತ್ತೋಡಿ ಭಾಗವಹಿಸಲಿದ್ದಾರೆ.
ಅತ್ಯುತ್ತಮ ಪಿಎಂಶ್ರೀ ಶಾಲೆ ಅತ್ಯುತ್ತಮ ಎಸ್ ಡಿ ಎಂ ಸಿ ,ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಶಾಸಕರು ಸಮರ್ಪಣೆ ಮಾಡಲಿದ್ದಾರೆ. ಬಳಿಕ ಸಾಂಸ್ಕೃತಿಕ ನಡೆಯಲಿದೆ ಎಂದು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರವಿಚಂದ್ರ,ಶಾಲಾ ಮುಖ್ಯಗುರು ತಾರಾನಾಥ ಸವಣೂರು,ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ವಸಂತ ಎಸ್ ವೀರಮಂಗಲ ತಿಳಿಸಿದ್ದಾರೆ.
