ಮಂಗಳೂರು: ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಅಭಿನಯ ಮತ್ತು ನಿರ್ದೇಶನದ ‘ಜೈ’ ಚಲನಚಿತ್ರ ತುಳು ಮತ್ತು ಕನ್ನಡ ಭಾಷೆಯಲ್ಲಿ ನ. 14 ರಂದು ವಿಶ್ವದಾದ್ಯಂತ ತೆರೆ ಕಂಡಿದೆ.
ಹಿರಿಯರು ಹಾಕಿಕೊಟ್ಟ ದಾರಿಯಲ್ಲಿ ಹೆಜ್ಜೆ ಇಡುತ್ತಿದ್ದೇವೆ. ಬಹಳಷ್ಟು ಯಶಸ್ವಿ ಸಿನಿಮಾಗಳನ್ನು ನೀಡಿದ ನಿರ್ಮಾಪಕರು ನಿರ್ದೇಶಕರು ತುಳು ಚಿತ್ರರಂಗದಲ್ಲಿ ಇದ್ದಾರೆ. ಅವರ ಮಾರ್ಗದರ್ಶನ ಮತ್ತು ಅವರ ಅನುಭವಗಳನ್ನು ಪಡೆದು ಸಿನಿಮಾ ನಿರ್ಮಿಸಿದ್ದೇವೆ. ಜೈ ಸಿನಿಮಾ ನನ್ನ ಕನಸು, ಶ್ರದ್ದೆ ಭಕ್ತಿ ಇಟ್ಟು ಸಿನಿಮಾ ಮಾಡಿದ್ದೇವೆ. ಈ ಸಿನಿಮಾಕ್ಕಾಗಿ ಬಹಳಷ್ಟು ಜನರು ಬೆವರು ಸುರಿಸಿದ್ದಾರೆ ನನ್ನ ಮೇಲೆ ನಂಬಿಕೆ ಇಟ್ಟು ಜೈ ಸಿನಿಮಾ ನವಂಬರ್ 14 ರಂದು ದೇಶಾದ್ಯಂತ ಬಿಡುಗಡೆ ಮಾಡುತ್ತಿದ್ದೇವೆ ಎಂದು ಚಿತ್ರದ ನಿರ್ದೇಶಕ, ನಟ ರೂಪೇಶ್ ಶೆಟ್ಟಿ ತಿಳಿಸಿದ್ದಾರೆ.
ಜೈ ಸಿನಿಮಾ ತುಳು ಮತ್ತು ಕನ್ನಡದಲ್ಲಿ ಬಿಗ್ ಬಜೆಟ್ನ ಸಿನಿಮಾ ಆಗಿದ್ದು, ಜಿಲ್ಲೆಯ ಖ್ಯಾತನಾಮ ಕಲಾವಿದರು ಅಭಿನಯಿಸಿದ್ದಾರೆ.
ಗಿರಿಗಿಟ್, ಗಮ್ಜಾಲ್, ಸರ್ಕಸ್ ಚಿತ್ರಗಳ ಯಶಸ್ಸಿನ ಬಳಿಕ ರೂಪೇಶ್ ಶೆಟ್ಟಿ ಅವರು ಮತ್ತೊಂದು ಬಿಗ್ ಬಜೆಟ್ ನ ಸಿನಿಮಾ ನಿರ್ಮಿಸಿದ್ದಾರೆ. ಜೈ ಸಿನಿಮಾ ಆರ್ ಎಸ್ ಸಿನಿಮಾಸ್, ಶೂಲಿನ್ ಫಿಲಂಸ್, ಮುಗ್ರೋಡಿ ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣ ಆಗಿದೆ.
ರೂಪೇಶ್ ಶೆಟ್ಟಿ ಸಿನಿಮಾದ ನಿರ್ದೇಶಕರಾಗಿದ್ದು, ಕತೆ ಹಾಗೂ ಸಂಭಾಷಣೆಯನ್ನು ಪ್ರಸನ್ನ ಶೆಟ್ಟಿ ಬೈಲೂರು ಬರೆದಿದ್ದಾರೆ. ಚಿತ್ರಕತೆ ರೂಪೇಶ್ ಶೆಟ್ಟಿ ಮತ್ತು ವೇಣು ಹಸ್ರಳ್ಳಿ. ಕ್ಯಾಮರಾ ವಿನುತ್ ಕೆ, ಸಂಗೀತ ಲೊಯ್ ವೆಲೆಂಟಿನ್ ಸಲ್ದಾನ, ಸಂಕಲನ ರಾಹುಲ್ ವಸಿಷ್ಠ, ನೃತ್ಯ ಹಾಗೂ ಎಕ್ಸಿಕ್ಯೂಟಿವ್ ಪ್ರೊಡ್ಯುಸರ್ ನವೀನ್ ಶೆಟ್ಟಿ ಆರ್ಯನ್ಸ್.
’ಜೈ ಸಿನಿಮಾದಲ್ಲಿ ಸುನೀಲ್ ಶೆಟ್ಟಿ, ಡಾ| ದೇವದಾಸ್ ಕಾಪಿಕಾಡ್, ರಾಜ್ ದೀಪಕ್ ಶೆಟ್ಟಿ, ನವೀನ್ ಡಿ ಪಡೀಲ್, ಅರವಿಂದ ಬೋಳಾರ್, ಭೋಜರಾಜ ವಾಮಂಜೂರು, ಪ್ರಸನ್ನ ಶೆಟ್ಟಿ ಬೈಲೂರು, ಸಂದೀಪ್ ಶೆಟ್ಟಿ ಮಾಣಿಬೆಟ್ಟು, ಉಮೇಶ್ ಮಿಜಾರ್ ಮನೋಜ್ ಚೇತನ್ ಡಿ ಸೋಜ ಇನ್ನಿತರರು ಅಭಿನಯಿಸಿದ್ದಾರೆ. ನಾಯಕಿಯಾಗಿ ಅದ್ವಿತಿ ಶೆಟ್ಟಿ ಅಭಿನಯಿಸಿದ್ದಾರೆ.
ನ. 14ರಂದು ಪುತ್ತೂರು ಭಾರತ್ ಸಿನಿಮಾಸ್ ಮಂಗಳೂರಿನಲ್ಲಿ ರೂಪವಾಣಿ, ಪಿವಿಆರ್, ಭಾರತ್ ಸಿನಿಮಾಸ್, ಸಿನಿಪೊಲಿಸ್, ಸುರತ್ಕಲ್ ನಲ್ಲಿ ಸಿನಿಗ್ಯಾಲಕ್ಸಿ, ಪಡುಬಿದ್ರೆಯಲ್ಲಿ ಭಾರತ್ ಸಿನಿಮಾಸ್, ಉಡುಪಿಯಲ್ಲಿ ಕಲ್ಪನ, ಭಾರತ್ ಸಿನಿಮಾಸ್, ಮಣಿಪಾಲದಲ್ಲಿ ಭಾರತ್ ಸಿನಿಮಾಸ್, ಬೆಳ್ತಂಗಡಿಯಲ್ಲಿ ಭಾರತ್, ಕುಂದಾಪುರದಲ್ಲಿ ಭಾರತ್ ಸಿನಿಮಾಸ್, ದೇರಳಕಟ್ಟೆಯಲ್ಲಿ ಭಾರತ್ ಸಿನಿಮಾಸ್, ಕಾರ್ಕಳದಲ್ಲಿ ರಾಧಿಕಾ, ಪ್ಲಾನೆಟ್ನಲ್ಲಿ ಜೈ ಸಿನಿಮಾ ತೆರೆ ಕಾಣಲಿದೆ.
