





ಪುತ್ತೂರು: ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಅಭಿನಯ ಮತ್ತು ನಿರ್ದೇಶನದ ‘ಜೈ’ ಚಲನಚಿತ್ರ ತುಳು ಮತ್ತು ಕನ್ನಡ ಭಾಷೆಯಲ್ಲಿ ನ.14 ರಂದು ವಿಶ್ವದಾದ್ಯಂತ ತೆರೆ ಕಂಡಿದ್ದು, ಪುತ್ತೂರಿನ ಭಾರತ್ ಸಿನೆಮಾಸ್ ನಲ್ಲಿಯೂ ಬಿಡುಗಡೆಗೊಂಡಿತು.


ಮಾಜಿ ಶಾಸಕ ಸಂಜೀವ ಮಠಂದೂರು ದೀಪ ಬೆಳಗಿಸಿ ಉದ್ಘಾಟಿಸಿದರು. ಅಶ್ವಿನಿ ಹೋಟೆಲ್ ಮಾಲಕ ಕರುಣಾಕರ ರೈ ದೇರ್ಲ, ಪತ್ರಕರ್ತರ ಸಂಘದ ಅಧ್ಯಕ್ಷ ಸಿದ್ದಿಕ್ ನೀರಾಜೆ, ಪುನೀತ್ ಆರ್ಕೆಸ್ಟ್ರಾ ತಂಡದ ಚಂದ್ರಶೇಖರ್ ಹೆಗ್ಡೆ, ನಟಿ ಪವಿತ್ರ ಹೆಗ್ಡೆ, ಮಧುಸೂದನ್, ದ್ವಾರಕಾ ಕನ್ಸ್ಟ್ರಕ್ಷನ್ ಮಾಲಕ ಗೋಪಾಲಕೃಷ್ಣ ಭಟ್, ಸಿನಿಮಾ ವಿತರಕರಾದ ಬಾಲಕೃಷ್ಣ ರೈ ಕುಕ್ಕಾಡಿ, ಲತಾ ಮಧುಸೂದನ್, ಭಾರತ್ ಸಿನಿಮಾ ಪುತ್ತೂರಿನ ಮ್ಯಾನೇಜರ್ ಜಯರಾಮ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.





ಜೈ ಸಿನಿಮಾ ತುಳು ಮತ್ತು ಕನ್ನಡದಲ್ಲಿ ಬಿಗ್ ಬಜೆಟ್‌ನ ಸಿನಿಮಾ ಆಗಿದ್ದು, ಜಿಲ್ಲೆಯ ಖ್ಯಾತನಾಮ ಕಲಾವಿದರು ಅಭಿನಯಿಸಿದ್ದಾರೆ. ಗಿರಿಗಿಟ್, ಗಮ್ಜಾಲ್, ಸರ್ಕಸ್ ಚಿತ್ರಗಳ ಯಶಸ್ಸಿನ ಬಳಿಕ ರೂಪೇಶ್ ಶೆಟ್ಟಿ ಅವರು ಮತ್ತೊಂದು ಬಿಗ್ ಬಜೆಟ್ ನ ಸಿನಿಮಾ ನಿರ್ಮಿಸಿದ್ದಾರೆ. ಜೈ ಸಿನಿಮಾ ಆರ್ ಎಸ್ ಸಿನಿಮಾಸ್, ಶೂಲಿನ್ ಫಿಲಂಸ್, ಮುಗ್ರೋಡಿ ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣ ಆಗಿದೆ.
ರೂಪೇಶ್ ಶೆಟ್ಟಿ ಸಿನಿಮಾದ ನಿರ್ದೇಶಕರಾಗಿದ್ದು, ಕತೆ ಹಾಗೂ ಸಂಭಾಷಣೆಯನ್ನು ಪ್ರಸನ್ನ ಶೆಟ್ಟಿ ಬೈಲೂರು ಬರೆದಿದ್ದಾರೆ. ಚಿತ್ರಕತೆ ರೂಪೇಶ್ ಶೆಟ್ಟಿ ಮತ್ತು ವೇಣು ಹಸ್ರಳ್ಳಿ. ಕ್ಯಾಮರಾ ವಿನುತ್ ಕೆ, ಸಂಗೀತ ಲೊಯ್ ವೆಲೆಂಟಿನ್ ಸಲ್ದಾನ, ಸಂಕಲನ ರಾಹುಲ್ ವಸಿಷ್ಠ, ನೃತ್ಯ ಹಾಗೂ ಎಕ್ಸಿಕ್ಯೂಟಿವ್ ಪ್ರೊಡ್ಯುಸರ್ ನವೀನ್ ಶೆಟ್ಟಿ ಆರ್ಯನ್ಸ್.
’ಜೈ ಸಿನಿಮಾದಲ್ಲಿ ಸುನೀಲ್ ಶೆಟ್ಟಿ, ಡಾ| ದೇವದಾಸ್ ಕಾಪಿಕಾಡ್, ರಾಜ್ ದೀಪಕ್ ಶೆಟ್ಟಿ, ನವೀನ್ ಡಿ ಪಡೀಲ್, ಅರವಿಂದ ಬೋಳಾರ್, ಭೋಜರಾಜ ವಾಮಂಜೂರು, ಪ್ರಸನ್ನ ಶೆಟ್ಟಿ ಬೈಲೂರು, ಸಂದೀಪ್ ಶೆಟ್ಟಿ ಮಾಣಿಬೆಟ್ಟು, ಉಮೇಶ್ ಮಿಜಾರ್ ಮನೋಜ್ ಚೇತನ್ ಡಿ ಸೋಜ ಇನ್ನಿತರರು ಅಭಿನಯಿಸಿದ್ದಾರೆ. ನಾಯಕಿಯಾಗಿ ಅದ್ವಿತಿ ಶೆಟ್ಟಿ ಅಭಿನಯಿಸಿದ್ದಾರೆ.










