ಪುತ್ತೂರು:ಸಜಂಕಾಡಿ ಸ.ಹಿ.ಪ್ರಾ ಶಾಲೆಯಲ್ಲಿ ಪೋಷಕ-ಶಿಕ್ಷಕರ ಮಹಾಸಭೆ ಮತ್ತು ಮಕ್ಕಳ ದಿನಾಚರಣೆ ನಡೆಯಿತು.
ಗಿಡವೊಂದಕ್ಕೆ ನೀರುಣಿಸುವ ಮೂಲಕ ಪೋಷಕ ಶಿಕ್ಷಕರ ಮಹಾಸಭೆಯನ್ನು ಉದ್ಘಾಟಿಸಲಾಯಿತು .ಸಭೆಯ ಅಧ್ಯಕ್ಷತೆಯನ್ನು ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷೆ ಯಶೋಧ ವಹಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು .ಮಕ್ಕಳ ಸುರಕ್ಷತೆ ಮತ್ತು ಪೋಕ್ಸೋ ಕಾಯ್ದೆಯ ಬಗ್ಗೆ ಪ್ರಭಾರ ಮುಖ್ಯಗುರು ಸುಮಲತಾ ಪಿ.ಕೆ ಮಾಹಿತಿ ನೀಡಿದರು.

ಮಕ್ಕಳ ಬೆಳವಣಿಗೆಯಲ್ಲಿ ಪೋಷಕರ ಪಾತ್ರ ,ಶಾಲೆಯ ಅಭಿವೃದ್ದಿಯಲ್ಲಿ ಪೋಷಕರ ಸಹಭಾಗಿತ್ವ,ದಾಖಲಾತಿ ಆಂದೋಲನದ ಕುರಿತು ಶಿಕ್ಷಕ ಗಣೇಶ ನಾಯಕ್ ಪುತ್ತೂರು ಮಾಹಿತಿ ನೀಡಿದರು .ಶಾಲಾ ಎಸ್. ಡಿ.ಎಂ.ಸಿ ಉಪಾಧ್ಯಕ್ಷ ಇಬ್ರಾಹಿಂ ವೇದಿಕೆಯಲ್ಲಿ ಉಪಸ್ಥಿತರಿದ್ದರು .ಪ್ರಭಾರ ಮುಖ್ಯಗುರು ಸುಮಲತಾ ಪಿ.ಕೆ ಸ್ವಾಗತಿಸಿ ,ಅತಿಥಿ ಶಿಕ್ಷಕಿ ಆಯಿಷತ್ ಮಿಸ್ರಿಯಾ ವಂದಿಸಿದರು .ಶಿಕ್ಷಕ ಗಣೇಶ ನಾಯಕ್ ಪುತ್ತೂರು ಕಾರ್ಯಕ್ರಮ ನಿರೂಪಿಸಿದರು .
ಸಭಾಕಾರ್ಯಕ್ರಮದ ಬಳಿಕ ಪೋಷಕರಿಗೂ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ನಡೆಸಿ ಬಹುಮಾನ ವಿತರಿಸಲಾಯಿತು.