ಕಲ್ಲಮ ರಾಘವೇಂದ್ರ ಮಠದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

0

ಪುತ್ತೂರು: ಶ್ರೀ ಗುರು ರಾಘವೇಂದ್ರ ಮಠ ಕಲ್ಲಮ ಹಾಗೂ ಶ್ರೀ ಷಣ್ಮುಖ ಯುವಕ ಮಂಡಲ (ರಿ.) ಸರ್ವೆ ಮತ್ತು ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ 15 ದಿನಗಳ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ ಕಲ್ಲಮ ಶ್ರೀ ಗುರು ರಾಘವೇಂದ್ರ ಮಠದ ಸಭಾಂಗಣದಲ್ಲಿ ನಡೆಯಿತು. ಮಠದ ವ್ಯವಸ್ಥಾಪಕ ಡಾ.ಸೀತಾರಾಮ್ ಭಟ್ ಕಲ್ಲಮ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಶ್ರೀ ಷಣ್ಮುಖ ಯುವಕ ಮಂಡಲದ ಅಧ್ಯಕ್ಷ ಗೌತಮ್ ರಾಜ್ ಕರುಂಬಾರು ಸಭಾಧ್ಯಕ್ಷತೆ ವಹಿಸಿದ್ದರು. ನೆಮ್ಮದಿ ವೆಲ್‌ನೆಸ್ ಸೆಂಟರ್ ಪುತ್ತೂರು ಇದರ ಮಾಲಕ ಕೆ. ಪ್ರಭಾಕರ ಸಾಲ್ಯಾನ್ ಬಾಕಿಲಗುತ್ತು ಫೂಟ್ ಫಲ್ಸ್ ಥೆರಪಿ ಬಗ್ಗೆ ಮಾಹಿತಿ ನೀಡಿದರು.

ಮುಂಡೂರು ಗ್ರಾ.ಪಂ ಅಧ್ಯಕ್ಷ ಚಂದ್ರಶೇಖರ ಎನ್.ಎಸ್.ಡಿ, ಸದಸ್ಯ ಕಮಲೇಶ್ ಎಸ್.ವಿ, ಎಸ್.ಜಿ.ಎಂ ಪ್ರೌಢಶಾಲಾ ನಿವೃತ್ತ ಮುಖ್ಯಗುರು ಶ್ರೀನಿವಾಸ್ ಎಚ್.ಬಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ ಶುಭ ಹಾರೈಸಿದರು. ಯುವಕ ಮಂಡಲದ ಪ್ರ.ಕಾರ್ಯದರ್ಶಿ ಗೌತಮ್ ಪಟ್ಟೆಮಜಲು ಸ್ವಾಗತಿಸಿ ವಂದಿಸಿದರು. ಸದಸ್ಯ ಜಯರಾಜ್ ಸುವರ್ಣ ನಿರೂಪಿಸಿದರು. ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರವು ನ.25ರ ವರೆಗೆ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here