





ನೆಲ್ಯಾಡಿ: ದಕ್ಷಿಣ ಕನ್ನಡ ಜಿಲ್ಲಾ ಗ್ರಾಮಾಂತರ ಮಹಿಳಾ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷರಾಗಿ ಕೌಕ್ರಾಡಿ ಗ್ರಾ.ಪಂ.ಸದಸ್ಯೆ ಸವಿತಾಸರ್ವೋತ್ತಮ ಗೌಡ ನೇಮಕಗೊಂಡಿದ್ದಾರೆ.
ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿ ಅವರ ಆದೇಶದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲಾ ಗ್ರಾಮಾಂತರ ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಉಷಾಅಂಚನ್ ಅವರು ಈ ನೇಮಕ ಮಾಡಿದ್ದಾರೆ. ಸವಿತಾ ಸರ್ವೋತ್ತಮ ಗೌಡ ಅವರು ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರೀಯರಾಗಿದ್ದು ಕಳೆದ 10 ವರ್ಷಗಳಿಂದ ಕೌಕ್ರಾಡಿ ಗ್ರಾ.ಪಂ.ಸದಸ್ಯೆಯಾಗಿದ್ದಾರೆ. ಕೌಕ್ರಾಡಿ ಗ್ರಾಮದ ಹೊಸಮನೆ ನಿವಾಸಿಯಾಗಿರುವ ಇವರು ಜಿ.ಪಂ.ಮಾಜಿ ಸದಸ್ಯ ಸರ್ವೋತ್ತಮ ಗೌಡರವರ ಪತ್ನಿ.








