ನೆಲ್ಯಾಡಿ: ಬಜತ್ತೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ನ.13ರಂದು ಗೋಳಿತ್ತಟ್ಟು ಸರಕಾರಿ ಉ.ಹಿ.ಪ್ರಾ.ಶಾಲೆಯಲ್ಲಿ ನಡೆಯಿತು.
ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಗೋಪಾಲ ಗೌಡ ಕುದ್ಕೋಳಿ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಮುಖ್ಯಗುರು ಶೀನಪ್ಪ ನಾಯ್ಕ ಎಸ್. ಕಾರ್ಯಕ್ರಮ ಉದ್ಘಾಟಿಸಿದರು. ಗೋಳಿತ್ತೊಟ್ಟು ಗ್ರಾ.ಪಂ.ಉಪಾಧ್ಯಕ್ಷ ಬಾಬು ಪೂಜಾರಿ ಕಿನ್ಯಡ್ಕ, ಶತಮಾನೋತ್ಸವ ಸಮಿತಿ ಅಧ್ಯಕ್ಷ ವೆಂಕಪ್ಪ ಗೌಡ ಡೆಬ್ಬೇಲಿ, ಎಸ್‌ಡಿಎಂಸಿ ಸದಸ್ಯ ಚಿದಾನಂದ ಗೌಡ, ಬಜತ್ತೂರು ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ಮಂಜುನಾಥ ಕೆ.ವಿ., ಶಾಲಾ ಮುಖ್ಯ ಶಿಕ್ಷಕಿ ಜಯಂತಿ ಬಿ.ಎಂ. ವೇದಿಕೆಯಲ್ಲಿ ಉಪಸ್ಥಿತರಿದ್ದರು. ಬಜತ್ತೂರು ಕ್ಲಸ್ಟರ್ ಶಿಕ್ಷಕರು ಕೊಠಡಿ ಮೇಲ್ವಿಚಾರಣೆ ನಡೆಸಿದರು. ನೆರೆಯ ಕ್ಲಸ್ಟರ್ ಶಿಕ್ಷಕರು ತೀರ್ಪುಗಾರರಾಗಿ ಸಹಕರಿಸಿದರು.
10 ಶಾಲೆಗಳ 200 ವಿದ್ಯಾರ್ಥಿಗಳು ಭಾಗಿ;
ಬಜತ್ತೂರು ಕ್ಲಸ್ಟರ್‌ನ 10 ಶಾಲೆಗಳ ಸುಮಾರು 200 ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು. ಕಿರಿಯರ ವಿಭಾಗದಲ್ಲಿ ಬಜತ್ತೂರು ಸರಕಾರಿ ಹಿ.ಪ್ರಾ.ಶಾಲೆ ಪ್ರಥಮ ಹಾಗೂ ಹೊಸಗದ್ದೆ ಸರಕಾರಿ ಹಿ.ಪ್ರಾ.ಶಾಲೆ ದ್ವಿತೀಯ ಪ್ರಶಸ್ತಿ ಪಡೆದುಕೊಂಡಿತು. ಹಿರಿಯರ ವಿಭಾಗದಲ್ಲಿ ಶಾಂತಿನಗರ ಸರಕಾರಿ ಹಿ.ಪ್ರಾ.ಶಾಲೆ ಪ್ರಥಮ ಹಾಗೂ ಕಾಂಚನ ಶ್ರೀ ಲಕ್ಷ್ಮೀನಾರಾಯಣ ಅನುದಾನಿತ ಹಿ.ಪ್ರಾ.ಶಾಲೆ ದ್ವಿತೀಯ ಪ್ರಶಸ್ತಿ ಪಡೆದುಕೊಂಡಿತು.
