





ಪುತ್ತೂರು:ಮುಕ್ರಂಪಾಡಿಯಲ್ಲಿ ನಗರಸಭೆ ಅನುಮತಿ, ಪರವಾನಿಗೆ ಇಲ್ಲದೆ ನಿಯಮ ಉಲ್ಲಂಘಿಸಿ ಮಸೀದಿ ಕಟ್ಟಡ ನಿರ್ಮಾಣ ಮಾಡುತ್ತಿದ್ದಾರೆಂದು ಆರೋಪಿಸಿ ವಿಶ್ವಹಿಂದು ಪರಿಷತ್ ಪುತ್ತೂರು ವತಿಯಿಂದ ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ.


ಕರ್ನಾಟಕ ರಾಜ್ಯ ಅನುಷ್ಠಾನಗೊಳಿಸಿದ ಕಾನೂನಿನ ಅನ್ವಯ ಜಿಲ್ಲಾಧಿಕಾರಿಯವರು ಕ್ರಮ ಜರುಗಿಸಬೇಕೆಂದು ದೂರಿನಲ್ಲಿ ತಿಳಿಸಿದ್ದಾರೆ. ಕಾನೂನು ಬಾಹಿರ ಕಟ್ಟಡ ನಿರ್ಮಾಣವನ್ನು ತಕ್ಷಣ ತಡೆಗಟ್ಟಬೇಕೆಂದು ದೂರಿನಲ್ಲಿ ಆಗ್ರಹಿಸಿದ್ದಾರೆ. ದೂರಿಗೆ ಸಂಬಂಧಿಸಿ ನಗರಸಭೆ ಅಧಿಕಾರಿಗಳು ಪರಿಶೀಲನೆ ಮಾಡಿದ್ದಾರೆ.











