





ಪುತ್ತೂರು: ಬ್ಯಾಂಕ್ ಆಫ್ ಬರೋಡಾ ಪ್ರವರ್ತಿತ ವಿಜಯ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಹಾಗೂ ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ನೇತೃತ್ವದಲ್ಲಿ 20 ದಿನಗಳ ಆರಿ ಎಂಬ್ರಾಯ್ಡರಿ ತರಬೇತಿ ಕಾರ್ಯಕ್ರಮ ನ.7ರಂದು ಕೋಡಿಂಬಾಡಿಯಲ್ಲಿ ಉದ್ಘಾಟನೆಗೊಂಡಿತು.



ಪ್ರತಿಷ್ಠಾನದ ಸಿಇಒ ಜ್ಯೋತಿರಾಜ್ ಕಾರ್ಯಕ್ರಮ ಉದ್ಘಾಟಿಸಿ ಶುಭಹಾರೈಸಿದರು. ಭಾರತೀಯ ವಿಕಾಸ ಟ್ರಸ್ಟ್ನ ಕಾರ್ಯಕ್ರಮ ವ್ಯವಸ್ಥಾಪಕ ಜೀವನ್ ಕೊಲ್ಯ, ಕೋಡಿಂಬಾಡಿ ಗ್ರಾ.ಪಂ. ಅಧ್ಯಕ್ಷೆ ಮಲ್ಲಿಕಾ, ಉಪಾಧ್ಯಕ್ಷ ಜಯಪ್ರಕಾಶ್, ಸದಸ್ಯ ರಾಮಣ್ಣ ಮುಖ್ಯ ಅತಿಥಿಗಳಾಗಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಶ್ವೇತಾ ಆಗಮಿಸಿದ್ದರು. ಒಟ್ಟು 25 ಜನ ಮಹಿಳೆಯರು ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡಿದ್ದಾರೆ.












