ಪುತ್ತೂರಿನಲ್ಲಿ ಬೀದಿ ನಾಯಿಗಳ ಹಾವಳಿಗೆ ತಕ್ಷಣ ಕ್ರಮಕೈಗೊಳ್ಳುವಂತೆ ಕೆಡಿಪಿ ಸಭೆಯಲ್ಲಿ ಶಾಸಕ ಅಶೋಕ್ ರೈ ಆಗ್ರಹ

0

ಪುತ್ತೂರು: ಪುತ್ತೂರು ನಗರ ಹಾಗೂ ಗ್ರಾಮಾಂತರ ಭಾಗದಲ್ಲಿ ಬೀದಿನಾಯಿಗಳ ಉಪಟಳ ಅಧಿಕವಾಗಿದ್ದು ಇದಕ್ಕೆ ತಕ್ಷಣ ಪರಿಹಾರ ಕಂಡುಕೊಳ್ಳಬೇಕು ಎಂದು ಪುತ್ತೂರು‌ ಶಾಸಕ ಅಶೋಕ್ ರೈ ಅವರು ಜಿ.ಪಂ ಸಭಾಂಗಣದಲ್ಲಿ ನಡೆದ ಜಿಲ್ಲಾ ತ್ರೈಮಾಸಿಕ ಸಭೆಯಲ್ಲಿ ಮಾತನಾಡಿದರು. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅಧ್ಯಕ್ಷತೆ ವಹಿಸಿದ್ದರು.


ಪುತ್ತೂರು ನಗರದಲ್ಲಿ ಬೀದಿ ನಾಯಿಗಳ ಸಂಖ್ಯೆ ಅಧಿಕವಾಗಿದೆ. ನಾಯಿಗಳು ಮಕ್ಕಳ ಮೇಲೆ ದಾಳಿ ಮಾಡುವ ಸಾಧ್ಯತೆ ಇದೆ. ಮಂಗಳೂರಿನಲ್ಲಿ ವ್ಯಕ್ತಿಯೋರ್ವರು ನಾಯಿ ಕಚ್ಚಿ ಸಾವನ್ನಪ್ಪಿದ್ದಾರೆ ಇದು ಎಲ್ಲೂ ಮರುಕಳಿಸಬಾರದು. ಶಾಲೆ ಬಿಟ್ಟು ತೆರಳುವ ಸಂದರ್ಭದಲ್ಲಿ ನಾಯಿಗಳ ಗುಂಪು ಓಡಿಸಿದ್ದಲ್ಲಿ ಅಪಘಾತಗಳು ಉಂಟಾಗುವ ಸಾಧ್ಯತೆ ಇದೆ. ಸುಪ್ರಿಂ ಆದೇಶ ಪ್ರಕಾರ ನಾಯಿಗಳನ್ನು ಶೆಲ್ ನಲ್ಲಿ ಹಾಕಿ ಅಲ್ಲಿ ಆಹಾರ ಹಾಕುವ ವ್ಯವಸ್ಥೆಯನ್ನು ಕೂಡಲೇ ಜಾರಿ ಮಾಡಬೇಕು. ಹುಚ್ಚು ನಾಯಿ ಕಡಿತಕ್ಕೊಳಗಾದಲ್ಲಿ ಅದರಿಂದ ಆಗುವ ಸಾವು ನೋವುಗಳನ್ನು ಸಹಿಸಲು ಯಾರಿಂದಲೂ ಸಾಧ್ಯವಿಲ್ಲ. ಜಿಲ್ಲಾಡಳಿತ ತಕ್ಷಣ ಎಚ್ಚೆತ್ತು ಬೀದಿ ನಾಯಿಗಳ ಉಪಟಳಕ್ಕೆ ಬ್ರೇಕ್ ಹಾಕಬೇಕು ಎಂದು ಸಭೆಗೆ ತಿಳಿಸಿದರು.

ಸಭೆಯ ವೇದಿಕೆಯಲ್ಲಿ ಜಿಲ್ಲಾಧಿಕಾರಿ ದರ್ಶನ್‌,ಮಂಗಳೂರು ಪೊಲೀಸ್ ಆಯುಕ್ತ ಸುಧೀರ್‌ ಕುಮಾರ್‌ ರೆಡ್ಡಿ, ಸಂಸದ ಕ್ಯಾ. ಬ್ರಿಜೇಶ್‌ ಚೌಟ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here