





ಕಾಣಿಯೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕರ ಶಿಕ್ಷಕರ ಮಹಾಸಭೆ ಕಾರ್ಯಕ್ರಮವನ್ನು ಪುತ್ತೂರು ತಾಲೂಕು ವಕೀಲರ ಸಂಘದ ಕೋಶಾಧಿಕಾರಿಗಳು, ಕಡಬ ತಾಲೂಕು ಜನ ಜಾಗೃತಿ ವೇದಿಕೆ ಅಧ್ಯಕ್ಷ ಮಹೇಶ್ ಕೆ.ಸವಣೂರು ಉದ್ಘಾಟಿಸಿ, ಪೋಕ್ಸೋ ಕಾಯಿದೆಯ ಬಗ್ಗೆ, ಮಕ್ಕಳ ರಕ್ಷಣಾ ಹಕ್ಕುಗಳ ಬಗ್ಗೆ ,ಆರ್ ಟಿ ಇ ಬಗ್ಗೆ ಮಾಹಿತಿ ನೀಡಿ ಪೋಷಕರೊಂದಿಗೆ ಸಂವಾದ ನಡೆಸಿದರು.



ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಪರಮೇಶ್ವರ ಗೌಡ ಅನಿಲ ವಹಿಸಿ ಶಾಲಾಭಿವೃದ್ಧಿ ಮತ್ತು ದಾಖಲಾತಿ ಆಂದೋಲನದಲ್ಲಿ ಪೋಷಕರ ಸಹಕಾರ ಅಗತ್ಯ ಎಂದರು. ಕಾಣಿಯೂರು ಪಂಚಾಯತ್ ಸದಸ್ಯ ರಾಮಣ್ಣ ಗೌಡ ಮುಗರಂಜ, ಬೆಳಂದೂರು ಗ್ರಾಮ ಪಂಚಾಯತ್ ಸದಸ್ಯೆ ಗೌರಿ ಮಾದೋಡಿ ಶುಭಹಾರೈಸಿದರು. ಕಾಣಿಯೂರು ಮಠದ ಮ್ಯಾನೇಜರ್ ಶ್ರೀನಿಧಿ ಆಚಾರ್, ಶಾಲಾ ಎಸ್ ಡಿ ಎಂ ಸಿ ಉಪಾಧ್ಯಕ್ಷೆ ಯಶೋದ ನೇರೋಳ್ತಡ್ಕ ಉಪಸ್ಥಿತರಿದ್ದರು. ಪ್ರತಿಭಾವಂತ ಮಕ್ಕಳನ್ನು ಗೌರವಿಸಲಾಯಿತು. ಶಾಲಾ ಮುಖ್ಯಗುರು ಬಾಲಕೃಷ್ಣ ಕೆ. ಪ್ರಾಸ್ತಾವಿಕದೊಂದಿಗೆ ಸ್ವಾಗತಿಸಿದರು. ಶಿಕ್ಷಕಿ ದೇವಕಿ ಪಿ ವಂದಿಸಿ, ಭಾರತಿ ಕೆ ನಿರೂಪಿಸಿದರು. ಬಳಿಕ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.















