ಪುತ್ತೂರು: ಕರ್ನಾಟಕ ರಾಜ್ಯ ವೈಟ್ ಲಿಫ್ಟಿಂಗ್ ಸಂಘದ ಆಶ್ರಯದಲ್ಲಿ ಸ್ಪೋರ್ಟ್ಸ್ ಮತ್ತು ಆರ್ಟ್ಸ್ ಅಸೋಸಿಯೇಷನ್ ಸುಳ್ಯದಲ್ಲಿ ನ 8 ಮತ್ತು 9 ರವರೆಗೆ ನಡೆದ ರಾಜ್ಯಮಟ್ಟದ ಯುವ ಕಿರಿಯ ಮತ್ತು ಹಿರಿಯ ವಿಭಾಗದ 71 ಕೆ ಜಿ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ಕಲಾ ವಿಭಾಗದ ದಿಶಾನ್ ಎಂ ಚಿನ್ನದ ಪದಕವನ್ನು ಪಡೆದಿರುತ್ತಾರೆ.
ಇವರಿಗೆ ಅಶ್ವತ್ ಕೆ. ಎಸ್ ತರಬೇತಿ ನೀಡಿರುತ್ತಾರೆ. ದಿಶಾನ್ ಎಂ ಆರ್ಯಾಪು ನಿವಾಸಿ ಬಾಬು ಮರಿಕೆ ಮತ್ತು ಪವಿತ್ರ ದಂಪತಿಗಳ ಪುತ್ರ.ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಕ ನಿರ್ದೇಶಕರಾದ ಡಾ. ಏಲಿಯಾಸ್ ಪಿಂಟೋ ಹಾಗೂ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.
