





ಪುತ್ತೂರು: ಬುರೂಜ್ ಇಂಗ್ಲಿಷ್ ಮೀಡಿಯಂ ಹೈಸ್ಕೂಲ್ ರಝಾನಗರ ಕಲಾಬಾಗಿಲು ಇಲ್ಲಿ ಮಕ್ಕಳ ದಿನಾಚರಣೆ ನಡೆಯಿತು. ಈ ಸಂದರ್ಭದಲ್ಲಿ ಕ್ರೀಡಾ ಜ್ಯೋತಿ ಬೆಳಗಿಸುದರ ಮೂಲಕ ಆಟೋಟ ಸ್ಪರ್ಧೆಗಳನ್ನು ಉದ್ಘಾಟಿಸಿದರು.



ವಿದ್ಯಾರ್ಥಿಗಳು ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಮತ್ತು ಆಟೋಟ ಸ್ಪರ್ಧೆಗಳಲ್ಲಿ ಭಾಗವಹಿಸಿ ಸಂಭ್ರಮಿಸಿದರು. ಪ್ರೌಢಶಾಲಾ ಮುಖ್ಯ ಶಿಕ್ಷಕಿ ಜಯಶ್ರೀ ಸಾಲ್ಯಾನ್ ಹಾಗೂ ಎಲ್ಲಾ ಶಿಕ್ಷಕರು ಉಪಸ್ಥಿತರಿದ್ದರು.





ಶೇಖ್ ಜಲಾಲುದ್ದೀನ್ ವಂದಿಸಿದರು. ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಲಸ್ರಾದೋ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.









