ಕಾಣಿಯೂರು: ದ.ಕ.ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆ ಪಳ್ಳತ್ತಾರಿನಲ್ಲಿ ನ.14ರಂದು ಮಕ್ಕಳ ದಿನಾಚರಣೆ ಆಚರಿಸಲಾಯಿತು.
ಪಳ್ಳತ್ತಾರು ಶಾಲಾ ಎಸ್.ಡಿಎಂಸಿ ಅಧ್ಯಕ್ಷರಾದ ಅಬೂಬಕ್ಕರ್ ಫಾಳಿಲಿ ಅವರು ಅಧ್ಯಕ್ಷತೆ ವಹಿಸಿ ಶಾಲಾ ವಿದ್ಯಾರ್ಥಿ ನಾಯಕನಿಗೆ ಸಿಹಿ ಹಂಚುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಶಾಲಾ ಮುಖ್ಯಗುರು ಸೀತಾರಾಮ ಕೆ ಜಿ ಸಂದೇಶ ಭಾಷಣ ಮಾಡಿದರು. ಎಸ್ ಡಿಎಂಸಿ ಉಪಾಧ್ಯಕ್ಷೆ ನೆಸೀಮಾ, ಸದಸ್ಯರಾದ ನವಾಝ್ ಸಖಾಫಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಶಿಕ್ಷಕಿಯರಾದ ವಾಣಿ,ಹರ್ಷಿಣಿ,ಶಾಹನಾ,ಅಡುಗೆ ಸಿಬ್ಬಂದಿಗಳಾದ ಸುನಂದ,ಸರೋಜಿನಿ ಸೇರಿದಂತೆ ಎಸ್ ಡಿಎಂಸಿ ಪದಾಧಿಕಾರಿಗಳು,ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಶಿಕ್ಷಕಿ ಸಂಧ್ಯಾ ಸ್ವಾಗತಿಸಿ, ಪಲ್ಲವಿ ವಂದಿಸಿದರು. ಶಿಕ್ಷಕ ರಂಗನಾಥ ಕಾರ್ಯಕ್ರಮ ನಿರೂಪಿಸಿದರು. ಬಳಿಕ ವಿದ್ಯಾರ್ಥಿಗಳಿಗೆ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು.
