





ರಾಮಕುಂಜ: ಶ್ರೀ ರಾಮಕುಂಜೇಶ್ವರ ವಿದ್ಯಾಲಯದಲ್ಲಿ ವಾರ್ಷಿಕ ಪ್ರಶಸ್ತಿ ವಿತರಣಾ ಸಮಾರಂಭ ಮತ್ತು ಮಕ್ಕಳ ದಿನಾಚರಣೆ ನ.14ರಂದು ನಡೆಯಿತು.


ಮುಖ್ಯ ಅತಿಥಿಯಾಗಿದ್ದ ಸುರತ್ಕಲ್ ಎನ್ಐಟಿಕೆ ಆಂಗ್ಲ ಮಾಧ್ಯಮ ಶಾಲೆಯ ನಿವೃತ್ತ ಪ್ರಾಂಶುಪಾಲ ಆಗಸ್ಟಿನ್ ಕೆ.ಎ. ಅವರು ಸಾಧನೆಗೆ ಬೇಕಾದ ಪರಿಶ್ರಮದ ಮಹತ್ವವನ್ನು ವಿವರಿಸಿದರು. ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ನೀರಜ್ಕುಮಾರ್ ರೈ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಾಲೆಯ ಕಾರ್ಯದರ್ಶಿ ಕೆ. ಸೇಸಪ್ಪ ರೈ, ಕಾರ್ಯಕಾರಿ ಸಮಿತಿ ಸದಸ್ಯರಾದ ಎಂ.ಸತೀಶ ಭಟ್, ಬಾಲಚಂದ್ರ ಮುಚ್ಚಿಂತ್ತಾಯ, ಹರಿನಾರಾಯಣ ಆಚಾರ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.






ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಮಕ್ಕಳ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಪ್ರಾಂಶುಪಾಲರಾದ ಪ್ರವೀದ್ ಪಿ. ಸ್ವಾಗತಿಸಿದರು. ಶಿಕ್ಷಕ ಶಿವಪ್ರಸಾದ್ ನಿರೂಪಿಸಿ, ಶಿಕ್ಷಕಿ ಅನುಶ್ರೀ ವಂದಿಸಿದರು.








