





ಪುತ್ತೂರು: ದಕ್ಷಿಣ ಕನ್ನಡ ಗ್ರಾಮಾಂತರ ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಶಾರದಾ ಅರಸ್ ನೇಮಕವಾಗಿದ್ದಾರೆ.


ಬನ್ನೂರು ನಿವಾಸಿಯಾಗಿರುವ ಶಾರದಾ ಅರಸ್ ಅವರು ಪುತ್ತೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆಯಾಗಿ ಕಾರ್ಯ ನಿರ್ವಹಿಸಿದ್ದರು. ಶಾಸಕ ಅಶೋಕ್ ಕುಮಾರ್ ರೈ ಅವರ ಶಿಫಾರಸ್ಸು ಮತ್ತು ಮಹಿಳಾ ಕಾಂಗ್ರೆಸ್ ರಾಜ್ಯಾಧ್ಯಕ್ಷೆ ಸೌಮ್ಯಾ ರೆಡ್ಡಿ ಅವರ ಆದೇಶದಂತೆ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಉಷಾ ಅಂಚನ್ ಅವರು ಶಾರದಾ ಅರಸ್ ಅವರನ್ನು ನೇಮಕ ಮಾಡಿದ್ದಾರೆ.















