ದ.ಕ.ಜಿಲ್ಲಾ ಗ್ರಾಮಾಂತರ ಮಹಿಳಾ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳಿಗೆ, ಬ್ಲಾಕ್ ಅಧ್ಯಕ್ಷರಿಗೆ ಆದೇಶಪತ್ರ ವಿತರಣೆ, ಮಾಹಿತಿ ಕಾರ್ಯಾಗಾರ

0

ಪುತ್ತೂರು: ದ.ಕ.ಜಿಲ್ಲಾ ಗ್ರಾಮಾಂತರ ಮಹಿಳಾ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳಿಗೆ, ಬ್ಲಾಕ್ ಅಧ್ಯಕ್ಷರುಗಳಿಗೆ ನೇಮಕಾತಿ ಆದೇಶ ಪತ್ರ ವಿತರಣೆ ಮತ್ತು ಮಾಹಿತಿ ಕಾರ್ಯಾಗಾರ ‘ಮಹಿಳಾ ಸಂಕಲ್ಪ’ ನ.11ರಂದು ಪುತ್ತೂರು ವಿದ್ಯಾಮಾತಾ ಸಭಾಭವನದಲ್ಲಿ ನಡೆಯಿತು.


ಮಾಜಿ ಶಾಸಕಿ ಶಕುಂತಳಾ ಶೆಟ್ಟಿಯವರು ಕಾರ್ಯಕ್ರಮ ಉದ್ಘಾಟಿಸಿ, ಪ್ರತಿಜ್ಞಾವಿಧಿ ಬೋಧಿಸಿದರು. ಅತಿಥಿಯಾಗಿದ್ದ ವಿಧಾನಪರಿಷತ್ ಸದಸ್ಯರೂ, ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆದ ಮಂಜುನಾಥ ಭಂಡಾರಿ ಅವರು ನೇಮಕಾತಿ ಆದೇಶಪತ್ರ, ಐಡಿ ಕಾರ್ಡ್ ವಿತರಿಸಿ ಮಾತನಾಡಿ, ಇದೊಂದು ಮಾದರಿ ಕಾರ್ಯಕ್ರಮವಾಗಿದೆ. 80 ಮಂದಿ ಪದಾಧಿಕಾರಿಗಳಿಗೆ ಏಕಕಾಲದಲ್ಲಿ ಆದೇಶ ವಿತರಣೆ ಮಾಡಿ, ಹೇಗೆ ಜವಾಬ್ದಾರಿ ನಿರ್ವಹಿಸಬೇಕು ಎಂಬ ಮಾಹಿತಿ ಕಾರ್ಯಾಗಾರ ಆಯೋಜಿಸುತ್ತಿರುವುದು ಶ್ಲಾಘಿಸಿದರು. ಮಹಿಳೆಯರು ಸಂಘಟಿತರಾಗಿ ಕೆಲಸ ಮಾಡಿ ಗ್ರಾಮ ಮಟ್ಟದಲ್ಲಿ ಪಕ್ಷದ ಬಲವರ್ಧನೆ ಆಗಬೇಕು. ಮಹಿಳಾ ಸಬಲೀಕರಣಕ್ಕಾಗಿಯೇ ರಾಜ್ಯ ಸರಕಾರ ಐದು ಗ್ಯಾರಂಟಿ ಯೋಜನೆ ಜಾರಿಗೆ ತಂದಿದೆ ಎಂದರು. ಶಾಸಕ ಅಶೋಕ್ ಕುಮಾರ್ ರೈ, ಮಾಜಿ ಸಚಿವ ಬಿ.ರಮಾನಾಥ ರೈ, ಕಾಂಗ್ರೆಸ್ ನಾಯಕಿ ಲಾವಣ್ಯ ಸಂದರ್ಭೋಚಿತವಾಗಿ ಮಾತನಾಡಿದರು.

ಗೌರವಾರ್ಪಣೆ
ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಅರ್ಚನಾ, ಶೈಲಜಾರಾಜೇಶ್, ಬಂಟ್ವಾಳ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷೆ ಜಯಂತಿ ಪೂಜಾರಿ, ಕಡಬ ಪಟ್ಟಣ ಪಂಚಾಯತ್ ಉಪಾಧ್ಯಕ್ಷೆ ನೀಲಾವತಿಶಿವರಾಂ ಅವರನ್ನು ಗೌರವಿಸಲಾಯಿತು.

ಜಿ.ಪಂ.ಮಾಜಿ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ, ಕೆಪಿಸಿಸಿ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನಮಿತಾ ಪೂಜಾರಿ, ಮಹಿಳಾ ಕಾಂಗ್ರೆಸ್ ಉಸ್ತುವಾರಿಗಳಾದ ಲೋಕೇಶ್ವರಿ ವಿನಯಚಂದ್ರ, ಸರಸ್ವತಿ ಕಾಮತ್, ನಮಿತಾ ಡಿ.ರಾವ್, ದ.ಕ.ಜಿಲ್ಲಾ ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಅಪ್ಪಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ದ.ಕ.ಜಿಲ್ಲಾ ಗ್ರಾಮಾಂತರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಉಷಾ ಅಂಚನ್ ಸ್ವಾಗತಿಸಿದರು. ಉಸ್ತುವಾರಿ ನಮಿತಾ ಡಿ.ರಾವ್ ಮಂಗಳೂರು ವಂದಿಸಿದರು. ಪ್ರಧಾನ ಕಾರ್ಯದರ್ಶಿ ಶಾರದಾಅರಸ್ ಸಹಕರಿಸಿದರು. ಶಬನಾ, ಪ್ರತಿಮಾ ರೈ, ಗೀತಾ ಕೋಲ್ಚಾರು ನಿರೂಪಿಸಿದರು.

ಪುತ್ತೂರು ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ, ಮಾಜಿ ಅಧ್ಯಕ್ಷರಾದ ಹೇಮನಾಥ ಶೆಟ್ಟಿ, ವಿಶ್ವನಾಥ ರೈ ಎಂ.ಬಿ., ಪಕ್ಷದ ಪ್ರಮುಖರಾದ ಚಿತ್ತರಂಜನ್ ಶೆಟ್ಟಿ, ಸುಭಾಶ್‌ಚಂದ್ರ ಶೆಟ್ಟಿ, ಜೋಕಿಂ ಡಿ.ಸೋಜಾ, ಮುರಳೀಧರ ರೈ ಮಠಂತಬೆಟ್ಟು, ಪ್ರವೀಣ್ ರೈ, ತೌಸೀಫ್ ಉಪ್ಪಿನಂಗಡಿ, ಪದ್ಮನಾಭ ಪೂಜಾರಿ, ಅಭಿಲಾಷ್ ಪಿ.ಕೆ., ಪಿ.ಪಿ.ವರ್ಗೀಸ್ ಕಡಬ, ಅಬ್ರಹಾಂ ಕೆ.ಪಿ.ನೆಲ್ಯಾಡಿ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here