ರಾಮಕುಂಜ: ನೇತ್ರಾವತಿ ತುಳುಕೂಟ ರಾಮಕುಂಜ ಇವರ ನೇತೃತ್ವದಲ್ಲಿ ತೆಗ್ರ್ ತುಳುಕೂಟ ನೂಜಿಬಾಳ್ತಿಲ ಇವರ ಆಶ್ರಯದಲ್ಲಿ ಡಿ.21ರಂದು ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ಕೇಪು ಶ್ರೀ ಮಹಾಗಣಪತಿ ಲಕ್ಷ್ಮೀಜನಾರ್ದನ ಆಂಜನೇಯ ದೇವಸ್ಥಾನದಲ್ಲಿ ನಡೆಯಲಿರುವ ಕಡಬ ತಾಲೂಕು ಪ್ರಥಮ ತುಳು ಸಮ್ಮೇಳನದ ಜನಪದ ಮೂಲಕುಣಿತ ಸ್ಪರ್ಧೆ ನ.16ರಂದು ರಾಮಕುಂಜ ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಶಾಲೆಯ ಸಭಾಂಗಣದಲ್ಲಿ ನಡೆಯಿತು.

ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಶಾಲೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈ ಉದ್ಘಾಟಿಸಿದರು. ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆ ಸಂಚಾಲಕರಾದ ಜಯಸೂರ್ಯ ರೈ ಮಾದೋಡಿ, ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಶಾಲಾ ಆಡಳಿತಾಧಿಕಾರಿ ಆನಂದ ಎಸ್.ಟಿ., ವ್ಯವಸ್ಥಾಪಕ ರಮೇಶ್ ರೈ ಆರ್.ಬಿ., ತೀರ್ಪುಗಾರರಾದ ವಿದ್ವಾನ್ ರಾಘವೇಂದ್ರ ಪ್ರಸಾದ್, ಶಿಕ್ಷಕಿ ಹೇಮಲತಾ ಪ್ರದೀಪ್, ಆನಂದ್ ಬಿ.ಸಿ.ರೋಡ್ ಉಪಸ್ಥಿತರಿದ್ದರು.
ವಿಜೇತರ ವಿವರ
ಪ್ರಾಥಮಿಕ ವಿಭಾಗದಲ್ಲಿ ಪ್ರಥಮ- ಬೊಳ್ಳಿಬೊಳ್ಪು ತುಳುಕೂಟ ಸವಣೂರು, ದ್ವಿತೀಯ-ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಪ್ರಾಥಮಿಕ ಶಾಲೆ, ರಾಮಕುಂಜ, ತೃತೀಯ-ಪ್ರಗತಿ ಆಂಗ್ಲಮಾಧ್ಯಮ ಶಾಲೆ ಕಾಣಿಯೂರು, ಪ್ರೌಢಶಾಲಾ ವಿಭಾಗ ಪ್ರಥಮ-ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆ ರಾಮಕುಂಜ, ದ್ವಿತೀಯ-ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಪ್ರೌಢಶಾಲೆ ರಾಮಕುಂಜ, ತೃತೀಯ-ಪ್ರಗತಿ ಕನ್ನಡ ಮಾಧ್ಯಮ ಪ್ರೌಢಶಾಲೆ ಕಾಣಿಯೂರು, ಕಾಲೇಜು ವಿಭಾಗದಲ್ಲಿ ಶ್ರೀ ರಾಮಕುಂಜೇಶ್ವರ ಪ.ಪೂ.ಕಾಲೇಜು, ರಾಮಕುಂಜ ಬಹುಮಾನ ಪಡೆದುಕೊಂಡಿದೆ.
ಸಾರ್ವಜನಿಕ ವಿಭಾಗದಲ್ಲಿ ಪ್ರಥಮ-ಬೊಳ್ಳಿಬೊಳ್ಪು ತುಳುಕೂಟ ಸವಣೂರು, ದ್ವಿತೀಯ-ನೇತ್ರಾವತಿ ತುಳುಕೂಟ ರಾಮಕುಂಜ, ತೃತೀಯ-ಪ್ರಗತಿ ಕಲಾ ಮತ್ತು ಸಾಂಸ್ಕೃತಿಕ ತಂಡ ಕಾಣಿಯೂರು ಪ್ರಶಸ್ತಿ ಪಡೆದುಕೊಂಡಿದೆ. ಡಿ.21ರಂದು ನಡೆಯುವ ತುಳು ಸಮ್ಮೇಳನದಲ್ಲಿ ವಿಜೇತರಿಗೆ ಬಹುಮಾನ ವಿತರಣೆ ನಡೆಯಲಿದೆ. ತೀರ್ಪುಗಾರರಾಗಿ ಸಹಕರಿಸಿದ ವಿದ್ವಾನ್ ರಾಘವೇಂದ್ರ ಪ್ರಸಾದ್, ಶಿಕ್ಷಕಿ ಹೇಮಲತಾ ಪ್ರದೀಪ್, ಆನಂದ್ ಬಿ.ಸಿ.ರೋಡ್ ಅವರಿಗೆ ಎಸ್ಆರ್ಕೆ ಲ್ಯಾಡರ್ಸ್ನ ಮಾಲಕ ಕೇಶವ ಅಮೈ ಅವರು ಸ್ಮರಣಿಕೆ ನೀಡಿ ಗೌರವಿಸಿದರು. ಶಿಕ್ಷಕ ಕಿಶೋರ್ಕುಮಾರ್ ಬಿ. ಕಾರ್ಯಕ್ರಮ ನಿರ್ವಹಿಸಿದರು. ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಶಾಲಾ ಶಿಕ್ಷಕರು, ಸಿಬ್ಬಂದಿಗಳು ಸಹಕರಿಸಿದರು.