ಕಡಬ: ಮನೆಯ ಹೊರಭಾಗದ ಕೊಟ್ಟಿಗೆಯಲ್ಲಿ ಮಲಗಿದ್ದ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಆರೋಪಿಯನ್ನು ಕಡಬ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಉಮೇಶ್ ಗೌಡ ಬಂಧಿತ ಆರೋಪಿ, ಈತ ನ.13ರಂದು ರಾತ್ರಿ ಮಹಿಳೆಯೊಬ್ಬರು ತನ್ನ ಮನೆಯ ಹೊರ ಭಾಗದ ಕೊಟ್ಟಿಗೆಯಲ್ಲಿ ಮಲಗಿದ್ದ ವೇಳೆ ಅಲ್ಲಿಗೆ ತೆರಳಿ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ್ದ. ಈ ವೇಳೆ ಮಹಿಳೆ ಸಹಾಯಕ್ಕಾಗಿ ಬೊಬ್ಬೆ ಹೊಡೆದಿದ್ದು ಮನೆಯೊಳಗಿದ್ದ ಮಹಿಳೆಯ ಗಂಡ ಹಾಗೂ ಮಕ್ಕಳು ಓಡಿ ಬಂದಿದ್ದಾರೆ. ಈ ವೇಳೆ ಆರೋಪಿಯನ್ನು ಸ್ಥಳೀಯ ವ್ಯಕ್ತಿ ಉಮೇಶ್ ಗೌಡ ಎಂದು ಗುರುತಿಸಿ, ಕೂಡಲೇ ಆತನನ್ನು ಹಿಡಿಯಲು ಪ್ರಯತ್ನಿಸಿದಾಗ ಆತ ಎಲ್ಲರಿಗೂ ಹಲ್ಲೆ ನಡೆಸಿ ಪರಾರಿಯಾಗಿದ್ದ. ಈ ವೇಳೆ ಮಹಿಳೆಗೆ ಜಾತಿ ನಿಂದನೆಯನ್ನೂ ಮಾಡಿದ್ದ. ಈ ಬಗ್ಗೆ ಮಹಿಳೆ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡಿದ್ದ ಕಡಬ ಪೊಲೀಸರು ಆರೋಪಿಯನ್ನು ನ.16ರಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ
