





ಪುತ್ತೂರು: ಮಕ್ಕಳ ದಿನಾಚರಣೆ ಪ್ರಯುಕ್ತ ಜಿಲ್ಲಾ ಕಾನೂನು ಪ್ರಾಧಿಕಾರ ಮಂಗಳೂರು, ತಾಲೂಕು ಕಾನೂನು ಸೇವೆಗಳ ಸಮಿತಿ ಪುತ್ತೂರು, ವಕೀಲರ ಸಂಘ ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ, ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟ ಪುತ್ತೂರು, ಶಿಕ್ಷಣ ಸಂಪನ್ಮೂಲ ಕೇಂದ್ರ, ಸಹಯೋಗದಲ್ಲಿ, ಕುಂಜೂರುಪಂಜ ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ಕಾನೂನು ಮಾಹಿತಿ ಕಾರ್ಯಾಗಾರ ನ.14ರಂದು ನಡೆಯಿತು.


ಕಾರ್ಯಕ್ರಮ ಉದ್ಘಾಟಿಸಿದ ವಕೀಲರ ಸಂಘದ ಅಧ್ಯಕ್ಷ ಜಗನ್ನಾಥ್ ರೈ ಮಾತನಾಡಿ ನಾನು ಕಲಿತ ಕುಂಜೂರುಪಂಜ ಶಾಲೆಯಲ್ಲಿ ಇದೀಗ ವಕೀಲ ವೃತ್ತಿಯಲ್ಲಿರುವ ನಾನು ಮಕ್ಕಳಿಗೆ ಕಾನೂನಿನ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದು ಹೆಮ್ಮೆ ತಂದಿದೆ ಎಂದು ಹೇಳಿ ವಿದ್ಯಾರ್ಥಿಗಳಿಗೆ ಮಕ್ಕಳ ಹಕ್ಕುಗಳ ಬಗ್ಗೆ ಮಾಹಿತಿ ನೀಡಿದರು.
ಸಂಪನ್ಮೂಲ ವ್ಯಕ್ತಿಯಾಗಿದ್ದ ಪುತ್ತೂರು ನ್ಯಾಯಾಲಯದ ಸಹಾಯಕ ಅಭಿಯೋಜಕರಾದ ಕುಮಾರಿ ಚೇತನಾ ದೇವಿ ಮಾತನಾಡಿ ವಿದ್ಯಾರ್ಥಿಗಳಿಗೆ ಮಕ್ಕಳ ಕಾಯ್ದೆಗಳ ಬಗ್ಗೆ ಹಾಗೂ ಮಕ್ಕಳ ಹಕ್ಕುಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರು.






ಕಾರ್ಯಕ್ರಮದಲ್ಲಿ ಪುತ್ತೂರು ಶಿಕ್ಷಣ ಸಂಪನ್ಮೂಲ ಕೇಂದ್ರದ ಅಧ್ಯಕ್ಷ ರಫೀಕ್ ದರ್ಬೆ ಮಾತನಾಡಿ ವಿದ್ಯಾರ್ಥಿ ಜೀವನದಲ್ಲಿ ನಮ್ಮ ಹಕ್ಕುಗಳನ್ನು ನಾವು ಯಾವ ರೀತಿಯಲ್ಲಿ ಪಡೆಯಬೇಕು ಎನ್ನುವ ಕುರಿತು ಮಕ್ಕಳ ಹೆತ್ತವರಿಗೆ ಸಮಗ್ರ ಮಾಹಿತಿ ನೀಡಿದರು.
ನ್ಯಾಯಾವಾದಿ ಮಮತ ಕಾರ್ಯಕ್ರಮಕ್ಕೆ ಶುಭ ಕೋರಿದರು. ಶಿಕ್ಷಣ ಸಂಪನ್ಮೂಲ ಕೇಂದ್ರದ ಸದಸ್ಯೆ ನ್ಯಾಯವಾದಿ ರಾಜೇಶ್ವರಿ ಮತ್ತು ಕವಿತಾ ದಿನಕರ್ ಅವರು ಮಕ್ಕಳ ಹಕ್ಕುಗಳ ಬಗೆಗಿನ ಹಾಡುಗಳ ಮೂಲಕ ರಂಜಿಸಿದರು. ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷ ಶರೀಫ್, ಉಪಾದ್ಯಕ್ಷೆ ಶುಭಲಕ್ಷ್ಮಿ, ಹಿರಿಯ ವಿದ್ಯಾರ್ಥಿ ಸಂಘದ ಪೂವಪ್ಪ ಉಪಸ್ಥಿತರಿದ್ದರು. ಶಿಕ್ಷಣ ಸಂಪನ್ಮೂಲ ಒಕ್ಕೂಟ ದ.ಕ ಜಿಲ್ಲೆ ಇದರ ಪ್ರ.ಕಾರ್ಯದರ್ಶಿ ನಯನಾ ರೈ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಪ್ರಭಾರ ಶಿಕ್ಷಕಿ ಶಶಿಕಲಾ ಸ್ವಾಗತಿಸಿದರು. ನ್ಯಾಯವಾದಿ ಚಂದ್ರಾವತಿ ವಂದಿಸಿದರು. ಜ್ಯೋತಿ ಸಹಕರಿಸಿದರು.










