





ಪುತ್ತೂರು: ದ.ಕ ಜಿಲ್ಲಾ ಗ್ರಾಮೀಣ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷೆಯಾಗಿ ಫೌಝಿಯಾ ಇಬ್ರಾಹಿಂ ನೇಮಕಗೊಂಡಿದ್ದಾರೆ.
ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯಾ ರೆಡ್ಡಿ ಅವರ ಆದೇಶದ ಮೇರೆಗೆ ದ.ಕ ಜಿಲ್ಲಾ ಗ್ರಾಮೀಣ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಉಷಾ ಅಂಚನ್ ಅವರು ಈ ನೇಮಕ ಮಾಡಿದ್ದಾರೆ.


ಫೌಝಿಯಾ ಇಬ್ರಾಹಿಂ ಅವರು ಪ್ರಸ್ತುತ ನೆ.ಮುಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದು ಈ ಹಿಂದೆ ಪುತ್ತೂರು ತಾಲೂಕು ಪಂಚಾಯತ್ ಸದಸ್ಯರಾಗಿ, ನೆ.ಮುಡ್ನೂರು ಗ್ರಾ.ಪಂ ಸದಸ್ಯರಾಗಿ, ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಇವರ ಪತಿ ಇಬ್ರಾಹಿಂ ಕೆ ಅವರು ನೆ.ಮುಡ್ನೂರು ಗ್ರಾ.ಪಂ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.















