





ಪುತ್ತೂರು:ಆಕಾಂಕ್ಷಾ ಚಾರಿಟೇಬಲ್ ಟ್ರಸ್ಟ್ ಹಾಗೂ ಕೋಡ್ ಕ್ರಾಫ್ಟ್ ಟೆಕ್ನಾಲಜೀಸ್ ಮಂಗಳೂರು ಇದರ ಸಹಯೋಗದಲ್ಲಿ ರಾಮಕೃಷ್ಣ ಪ್ರೌಢಶಾಲೆ ಪುತ್ತೂರು ಇಲ್ಲಿ ನಡೆದ ಜಿಲ್ಲಾ ಮಟ್ಟದ ಕೋಡ್ ಕ್ರಾಫ್ಟ್ ವಿಜ್ಞಾನ ಮೇಳದಲ್ಲಿ ಪ್ರಿಯದರ್ಶಿನಿ ವಿದ್ಯಾಸಂಸ್ಥೆ ಯ ಏಳನೇ ತರಗತಿಯ ವಿದ್ಯಾರ್ಥಿಗಳಾದ ಪ್ರಾಪ್ತಿ ಹಾಗು ವೈಗ ಸುನಿಲ್ ತೃತೀಯ ಸ್ಥಾನವನ್ನು ಪಡೆದು 3000ರೂ ನಗದು ಬಹುಮಾನಕ್ಕೆ ಭಾಜನರಾಗಿರುತ್ತಾರೆ.


ಅದೇ ರೀತಿ 7ನೇ ತರಗತಿ ವಿದ್ಯಾರ್ಥಿಗಳಾದ ವೈಷ್ಣವಿ ಹಾಗೂ ಸಾನ್ವಿ ಸಮಾಧಾನಕರ ಬಹುಮಾನವನ್ನು ಪಡೆದು ಒಂದು ಸಾವಿರ ನಗದನ್ನು ಪಡೆದುಕೊಂಡಿರುತ್ತಾರೆ. ವಿಜೇತರಾದ ವಿದ್ಯಾರ್ಥಿಗಳಿಗೆ ಹಾಗೂ ಕೋಡ್ ಕ್ರಾಫ್ಟ್ ವಿಜ್ಞಾನ ಮೇಳದಲ್ಲಿ ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳಿಗೆ ಪ್ರಿಯದರ್ಶಿನಿ ವಿದ್ಯಾಸಂಸ್ಥೆಯಿಂ ಅಭಿನಂದನೆ ತಿಳಿಸಿದ್ದಾರೆ.















