





ಪುತ್ತೂರು: ಸಂತ ಫಿಲೋಮಿನಾ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ಮಕ್ಕಳ ದಿನಾಚರಣೆಯನ್ನು ನ.15ರಂದು ಆಚರಿಸಲಾಯಿತು . ಶಾಲಾ ಸಂಚಾಲಕ ವಂದನೀಯ ಧರ್ಮ ಗುರು ಲಾರೆನ್ಸ್ ಮಸ್ಕರೇನಸ್, ಅತಿಥಿಗಳಾದ ಜೆರಾಲ್ಡ್ ಡಿಕಾಸ್ಟ, ಮಾಯಿದೆ ದೇವುಸ್ ಚರ್ಚ್ ಪಾಲನಾ ಸಮಿತಿ ಉಪಾಧ್ಯಕ್ಷರು, ಶಾಲಾ ರಕ್ಷಕ- ಶಿಕ್ಷಕ ಸಂಘದ ಉಪಾಧ್ಯಕ್ಷ ಮುಕೇಶ್, ಶಾಲಾ ಮುಖ್ಯೋಪಾಧ್ಯಾಯನಿ ಭಗಿನಿ ಲೋರಾ ಪಾಯ್ಸ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.



ಗಣ್ಯರು, ಶಿಕ್ಷಕ ವೃಂದದವರೆಲ್ಲರೂ ಜವಹರ್ ಲಾಲ್ ನೆಹರು ರವರ ಭಾವಚಿತ್ರಕ್ಕೆ ಗೌರವಾರ್ಪಣೆಗೈದು , ದೀಪ ಪ್ರಜ್ವಲನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು .





ಪ್ರಾರ್ಥನಾ ಗೀತೆಯೊಂದಿಗೆ ಕಾರ್ಯಕ್ರಮವನ್ನು ಪ್ರಾರಂಭಿಸಿ, ಶಾಲಾ ಸಂಚಾಲಕರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು .ಮಕ್ಕಳ ದಿನಾಚರಣೆಯ ಪ್ರಯುಕ್ತ ಆಯೋಜಿಸಲಾದ ಆಟೊಟ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು. ಶಿಕ್ಷಕ ವೃಂದ ಸಹಕರಿಸಿದರು. ಶಿಕ್ಷಕಿ ಅನ್ವಿತಾ ಸರ್ವರನ್ನು ಸ್ವಾಗತಿಸಿ, ರೇಷ್ಮಾ ರವರು ವಂದಿಸಿದರು.ಶಿಕ್ಷಕಿ ಜಾಸ್ಮಿನ್ ಗೋವಿಯಸ್ ಹಾಗೂ ವಿದ್ಯಾಶ್ರೀ ಕಾರ್ಯಕ್ರಮ ನಿರೂಪಿಸಿದರು.










