ಕುಂಬ್ರ ಅಂಗನವಾಡಿಯಲ್ಲಿ ಬಾಲಮೇಳ ಕಾರ್ಯಕ್ರಮ

0

ಪುತ್ತೂರು: ಒಳಮೊಗ್ರು ಗ್ರಾಮದ ಕುಂಬ್ರ ಅಂಗನವಾಡಿ ಕೇಂದ್ರದ ಬಾಲ ಮೇಳ ಕಾರ್ಯಕ್ರಮವನ್ನು ಕುಂಬ್ರ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಹಮ್ಮಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಮಕ್ಕಳಿಗೆ ವಿವಿಧ ಆಟೊಟ ಸ್ಪರ್ಧೆಗಳನ್ನು ಏರ್ಪಡಿಸಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಥಮ ದ್ವಿತೀಯ ಹಾಗೂ ತೃತೀಯ ಬಹುಮಾನಗಳನ್ನು ನೀಡಿ ಪ್ರೋತ್ಸಾಹಿಸಲಾಯಿತು. ಸಮಾರಂಭದಲ್ಲಿ ಕೆಪಿಎಸ್ ಕಾರ್ಯಾಧ್ಯಕ್ಷ ರಕ್ಷಿತ್ ರೈ ಮುಗೇರು, ಒಳಮೊಗ್ರು ಗ್ರಾಪಂ ಸದಸ್ಯರುಗಳಾದ ವಿನೋದ್ ಶೆಟ್ಟಿ ಮುಡಾಲ, ಶೀನಪ್ಪ ನಾಯ್ಕ, ಭಾರತೀಯ ಮಾನವ ಹಕ್ಕು ಪ್ರಾಧಿಕಾರದ ತಾಲೂಕು ಅಧ್ಯಕ್ಷ ಕುಂಬ್ರ ಅಬ್ಬಾಸ್ ಗೂನಡ್ಕ ಸೇರಿದಂತೆ ಶಾಲಾ ಶಿಕ್ಷಕ ವೃಂದದವರು, ಮಕ್ಕಳ ಪೋಷಕರು, ಬಾಲ ವಿಕಾಸ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಬಹುಮಾನಗಳ ಪ್ರಾಯೋಜಕತ್ವವನ್ನು ಬಾಲವಿಕಾಸ ಸಮಿತಿಯ ಅಧ್ಯಕ್ಷೆ ಚಿತ್ರ ಪ್ರಕಾಶ್‌ ನೀಡಿ ಸಹಕರಿಸಿದರು. ಅಂಗನವಾಡಿ ಶಿಕ್ಷಕಿ ಆಶಾಲತ ರೈ, ಸಹಾಯಕಿ ರಾಜೀವಿ ಸಹಕರಿಸಿದ್ದರು.

LEAVE A REPLY

Please enter your comment!
Please enter your name here