






ಪುತ್ತೂರು:ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನಂನ ವತಿಯಿಂದ ಆಯೋಜಿಸಲ್ಪಡುವ ಅಖಿಲ ಭಾರತೀಯ ಗಣಿತ- ವಿಜ್ಞಾನ ಮೇಳ 2025-26 ರ ರಾಷ್ಟ್ರೀಯ ಮಟ್ಟದ ಸ್ಪರ್ಧೆಗಳು ನವೆಂಬರ್ 13 ರಿಂದ 16ರವರೆಗೆ ಉತ್ತರ ಪ್ರದೇಶದ ಮೀರತ್ ನಲ್ಲಿ ನಡೆದಿದ್ದು, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲದ 9ನೇ ತರಗತಿಯ ವಿದ್ಯಾರ್ಥಿಯಾದ ಸಮೃಧ್ಧ್ ಆರ್ ಶೆಟ್ಟಿ ( ಶ್ರೀ ರಾಮಚಂದ್ರ ಮತ್ತು ಶ್ರೀಮತಿ ಶೋಭಾ ದಂಪತಿ ಪುತ್ರ) ಕಿಶೋರವರ್ಗದ ವಿಜ್ಞಾನ ಮಾದರಿ ತಯಾರಿ ಸ್ಪರ್ಧೆಯಲ್ಲಿ ‘ವಿದ್ಯುತ್ ಕಾಂತೀಯ ಪರಿಣಾಮಗಳು’ ಎಂಬ ವಿಷಯದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ ಹಾಗೂ ಕಿಶೋರವರ್ಗದ ವಿಜ್ಞಾನ ಮಾದರಿ ತಯಾರಿ ಸ್ಪರ್ಧೆಯಲ್ಲಿ ಸಮೃಧ್ಧ್ ಆರ್ ಶೆಟ್ಟಿ ವಿದ್ಯಾಭಾರತಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿರುವ ಏಕೈಕ ವಿದ್ಯಾರ್ಥಿ ಆಗಿರುತ್ತಾರೆ ಎಂದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.












