





ಉಪ್ಪಿನಂಗಡಿ: ಉಜಿರೆಯ ಎಸ್ಡಿಎಂ ಎಜುಕೇಶನಲ್ ಸೊಸೈಟಿಯ ಆಡಳಿತಕ್ಕೊಳಪಟ್ಟ ಕಾಂಚನದ ಶ್ರೀ ಲಕ್ಷ್ಮೀನಾರಾಯಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.


ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಜವಹಾರ್ಲಾಲ್ ನೆಹರೂ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಅರ್ಪಿಸಲಾಯಿತು. ಅಧ್ಯಕ್ಷತೆ ವಹಿಸಿದ್ದ ಶಾಲಾ ಮುಖ್ಯಗುರು ಲಕ್ಷ್ಮಣ ಗೌಡರವರು ಮಾತನಾಡಿ, ನೆಹರೂರವರ ಜೀವನ ಚರಿತ್ರೆ, ಅವರಿಗೆ ಮಕ್ಕಳ ಮೇಲಿದ್ದ ಪ್ರೀತಿಯನ್ನು ವಿವರಿಸಿದರು.





ವಿದ್ಯಾರ್ಥಿಗಳಾದ ಮೋಕ್ಷಣಿ, ಹಿತಾಶ್ರೀ, ತನ್ವಿ ಮಕ್ಕಳ ದಿನಾಚರಣೆಯ ಬಗ್ಗೆ ಭಾಷಣವನ್ನು ಮಾಡಿದರು. ಮಕ್ಕಳ ದಿನಾಚರಣೆ ಪ್ರಯುಕ್ತ ನಡೆಸಿದ ವಿವಿಧ ಸ್ಪರ್ಧಾ ವಿಜೇತ ವಿದ್ಯಾರ್ಥಿಗಳಿಗೆ ಈ ಸಂದರ್ಭ ಬಹುಮಾನವನ್ನು ವಿತರಿಸಲಾಯಿತು. ವೇದಿಕೆಯಲ್ಲಿ ಶಿಕ್ಷಕರು, ವಿದ್ಯಾರ್ಥಿ ಪ್ರತಿನಿಧಿಗಳು ಉಪಸ್ಥಿತರಿದ್ದರು.
7ನೇ ತರಗತಿಯ ವಿದ್ಯಾರ್ಥಿಗಳಾದ ಹಿತಾಶ್ರೀ ಸ್ವಾಗತಿಸಿ, ಹನಿಕ್ಷಾ ವಂದಿಸಿದರು. ಖುಷಿ ಜೆ.ಎಸ್. ಕಾರ್ಯಕ್ರಮ ನಿರೂಪಿಸಿದರು.









