ಪುತ್ತೂರು: ಸಂಜಯನಗರ ಅಂಗನವಾಡಿಯಲ್ಲಿ ಭಾರತದ ಪ್ರಥಮ ಪ್ರಧಾನಿ ಜವಾಹರಲಾಲ್ ನೆಹರುರವರ ಜನ್ಮದಿನಾಚರಣೆಯ ಪ್ರಯುಕ್ತ ಮಕ್ಕಳ ದಿನಾಚರಣೆ ಹಾಗೂ ಬಾಲ ಮೇಳ ಕಾರ್ಯಕ್ರಮ ನಡೆಯಿತು.
ಅಂಗನವಾಡಿ ಕೇಂದ್ರದ ಸಮಿತಿ ಅಧ್ಯಕ್ಷೆ ಶ್ರೀಮತಿ ನುಸೈದಾರವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಅಂಗನವಾಡಿ ಸ್ಥಾಪಕ, ಸ್ಥಳೀಯ ಮಾಜಿ ನಗರಸಭಾ ಸದಸ್ಯ ಎಚ್. ಮಹಮ್ಮದ್ ಆಲಿ, ನಗರಸಭೆಯ ಜಲಸಿರಿ ಯೋಜನೆಯ ಸಾರ್ವಜನಿಕ ಸಂಪರ್ಕಧಿಕಾರಿ ಉಸ್ಮಾನ್ ಬೊಳ್ವಾರ್, ಶಾಲಾ ಎಸ್ ಡಿ ಎಂ ಸಿ ಮಾಜಿ ಅಧ್ಯಕ್ಷ ಇಬ್ರಾಹಿಂ ಪಿ ಎಂ. ಉಪಸ್ಥಿತರಿದ್ದರು.
ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಪ್ರಮೀಳಾ ಸ್ವಾಗತಿಸಿ ದರು. ಅಂಗನವಾಡಿ ಸಹಾಯಕಿ ಶ್ರೀಮತಿ ಗೀತಾ ಕುಮಾರಿ, ಆಶಾ ಕಾರ್ಯ ಕರ್ತೆಯಾದ ಶ್ರೀಮತಿ ಕೃತಿಕಾ ಮೊದಲಾದವರು ಸಹಕರಿಸಿದರು.
ಈ ಸಂದರ್ಭದಲ್ಲಿ ಅಂಗನವಾಡಿ ಕಟ್ಟಡಕ್ಕೆ ಪೈಂಟಿಂಗ್ ಮಾಡಲು ಸಹಾಯ ಮಾಡಿದ ಅಬೂಬಕ್ಕರ್ ಪಿಸಿಎನ್ ರವರಿಗೆ ಸನ್ಮಾನ ಮಾಡಲಾಯಿತು.
