






ಪುತ್ತೂರು::ಕರ್ನಾಟಕ ರಾಜ್ಯ ಮಾರಾಟ ಮಹಾಮಂಡಳ ಬೆಂಗಳೂರು, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು, ದ.ಕ.ಜಿಲ್ಲಾ ಸಹಕಾರಿ ಯೂನಿಯನ್ ಮಂಗಳೂರು, ಪುತ್ತೂರು ಮತ್ತು ಕಡಬ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಹಾಗೂ ಇತರ ಎಲ್ಲಾ ಸಹಕಾರ ಸಂಘಗಳ ಸಹಕಾರ-ಸಹಭಾಗಿತ್ವದಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹ-2025 ಇದರ ತಾಲೂಕು ಮಟ್ಟದ ಸಹಕಾರ ಸಪ್ತಾಹ ಸಮಾರಂಭ ಹಾಗೂ ‘ಸಹಕಾರಿ ಉದ್ಯಮ ಶೀಲತೆಯಿಂದ ಯುವಜನ, ಮಹಿಳಾ ಮತ್ತು ಅಬಲ ವರ್ಗದ ಸಬಲೀಕರಣ’ ಕುರಿತು ವಿಚಾರಗೋಷ್ಠಿ ಕಾರ್ಯಕ್ರಮ ಪುತ್ತೂರು ಟೌನ್ ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತ್ತಿದ್ದು,ಕಾರ್ಯಕ್ರಮವನ್ನು ಶಾಸಕ ಅಶೋಕ್ ಕುಮಾರ್ ರೈ ಕಾರ್ಯಕ್ರಮ ಉದ್ಘಾಟಿಸಿದರು.


ಮುಖ್ಯ ಅತಿಥಿಗಳಾಗಿ ಆದರ್ಶ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ‘ಸಹಕಾರರತ್ನ’ ಸವಣೂರು ಸೀತಾರಾಮ ರೈಕೆ., ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಎಸ್.ಬಿ. ಜಯರಾಮ ರೈ, ಟೌನ್ ಬ್ಯಾಂಕ್ ಪುತ್ತೂರು ಅಧ್ಯಕ್ಷ ಕಿಶೋರ್ ಕೊಳತ್ತಾಯ, ದ.ಕ.ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕರಾದ ಚಂದ್ರಶೇಖರ್ ರಾವ್ ಕೆ. ನಿಧಿಮುಂಡ, ಭರತ್ ನೆಕ್ರಾಜೆ, ಟಿ.ಎ.ಪಿ.ಸಿ.ಎಂ.ಎಸ್. ಅಧ್ಯಕ್ಷ ಕೃಷ್ಣಕುಮಾರ್ ರೈ ಕೆದಂಬಾಡಿಗುತ್ತು, ದ.ಕ.ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕ ಮಂಜುನಾಥ್ ಎನ್. ಎಸ್., ಪುತ್ತೂರು ನಗರಸಭೆ ಅಧ್ಯಕ್ಷೆ ಲೀಲಾವತಿ, ಸಹಕಾರಿ ಸಂಘಗಳ ಸಹಾಯಕ ನಿಬಂಧಕ ರಘು ಎಸ್.ಎಂ. ಉಪಸ್ಥಿತರಿದ್ದರು.






ದ. ಕ.ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ನಿರ್ದೇಶಕರೂ ಆಗಿರುವ ಶಶಿಕುಮಾರ್ ರೈ ಬಾಲ್ಗೊಟ್ಟು ಅಧ್ಯಕ್ಷತೆ ವಹಿಸಿದ್ದಾರೆ.ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ ಧ್ವಜಾರೋಹಣ ನೆರವೇರಿಸಿದರು.

ಆರಂಭದಲ್ಲಿ ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾಯರ ಭಾವಚಿತ್ರಕ್ಕೆ ಹಾರಾರ್ಪಣೆ ಮಾಡಿ ಪುತ್ತೂರು ಎಸ್ ಸಿಡಿಸಿಸಿ ಬ್ಯಾಂಕ್ ಮುಖ್ಯ ಕಚೇರಿ ಬಳಿಯಿಂದ ಮೆರವಣಿಗೆಗೆ ಚಾಲನೆ ದೊರೆಯಿತು.ಟೌನ್ ಬ್ಯಾಂಕ್ವರೆಗೆ ಮೆರವಣಿಗೆ ಮೂಲಕ ತೆರಳಿ ಅಲ್ಲಿಯೂ ಮೊಳಹಳ್ಳಿ ಶಿವರಾಯರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಸಭಾ ಕಾರ್ಯಕ್ರಮ ನಡೆಯುತ್ತಿದೆ.







