ಪುತ್ತೂರು: ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ನ.25-26 ರಂದು ನಡೆಯುವ ವಿಜೃಂಭಣೆಯ ಷಷ್ಠಿ ಮಹೋತ್ಸವದ ಪ್ರಯುಕ್ತ ಗೊನೆ ಕಡಿಯುವ ಮುಹೂರ್ತ ಕಾರ್ಯಕ್ರಮವು ನ.19ರಂದು ಶ್ರೀ ಕ್ಷೇತ್ರದಲ್ಲಿ ನಡೆಯಲಿದೆ.
ಷಷ್ಠಿ ಮಹೋತ್ಸವವು ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ನಾಗೇಶ ತಂತ್ರಿವರ್ಯರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರಗಲಿದೆ ಎಂದು ಶ್ರೀ ಕ್ಷೇತ್ರದ ಗೌರವಾಧ್ಯಕ್ಷ ಶಾಸಕ ಅಶೋಕ್ ಕುಮಾರ್ ರೈ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪೂಜಾರಿ ಬೆದ್ರಾಳ ಹಾಗೂ ಸದಸ್ಯರು, ಅಥವಾ ಅರ್ಚಕ ವರ್ಗ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.