ಕಾನೂನು ಸೇವೆಗಳ ಪ್ರಾಧಿಕಾರದಿಂದ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಹಿರಿಯ ನಾಗರಿಕರ ದಿನಾಚರಣೆ

0

ಪುತ್ತೂರು: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು, ತಾಲೂಕು ಕಾನೂನು ಸೇವೆಗಳ ಸಮಿತಿ ಪುತ್ತೂರು ಹಾಗೂ ವಕೀಲರ ಸಂಘ ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ರೋಟರಿ ಕ್ಲಬ್ ಪುತ್ತೂರು ಸಿಟಿ ಹಾಗೂ ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟ ಮಂಗಳೂರು ಹಾಗೂ ಶಿಕ್ಷಣ ಸಂಪನ್ಮೂಲ ಕೇಂದ್ರ ಪುತ್ತೂರು ಇವುಗಳ ಸಹಯೋಗದೊಂದಿಗೆ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಕಾನೂನು ಮಾಹಿತಿ ಕಾರ್ಯಕ್ರಮ ಮನೀಷಾ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಹಿರಿಯ ವಕೀಲ ಪಿ ಕೆ ಸತೀಶನ್ ಉದ್ಘಾಟಿಸಿ ಶುಭ ಹಾರೈಸಿದರು. ಸಂಪನ್ಮೂಲ ವ್ಯಕ್ತಿಯಾಗಿದ್ದ ಪ್ಯಾನಲ್ ವಕೀಲೆ ಚಂದ್ರಾವತಿ ಟಿ ಮತ್ತು ಪುತ್ತೂರು ಶಿಕ್ಷಣ ಸಂಪನ್ಮೂಲ ಕೇಂದ್ರದ ಅಧ್ಯಕ್ಷ ಮೊಹಮ್ಮದ್ ರಫೀಕ್ ದರ್ಬೆ ಮಾತನಾಡಿದರು. ರೋಟರಿ ಕ್ಲಬ್ ಪುತ್ತೂರು ಸಿಟಿ ಅಧ್ಯಕ್ಷ ಪಿ. ಉಲ್ಲಾಸ್ ಪೈ ಸ್ವಾಗತಿಸಿದರು. ಶಿಕ್ಷಣ ಸಂಪನ್ಮೂಲ ಕೇಂದ್ರದ ಸದಸ್ಯರಾದ ನ್ಯಾಯವಾದಿ ರಾಜೇಶ್ವರಿ ವಂದಿಸಿದರು. ಶಿಕ್ಷಣ ಸಂಪನ್ಮೂಲ ಕೇಂದ್ರದ ವತ್ಸಲಾ ನಾಯಕ್ ಸಹಕರಿಸಿದರು. ಮಂಗಳೂರು ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟದ ಕಾರ್ಯದರ್ಶಿ ನಯನಾ ರೈ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here