ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವೃಕ್ಷಮಾತೆ ತಿಮ್ಮಕ್ಕ ಅವರಿಗೆ ನುಡಿನಮನ

0

ಪುತ್ತೂರು : ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ನಾಡಿನ ಹೆಸರಾಂತ ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕನವರ ನಿಧನದ ಹಿನ್ನೆಲೆ ಸಂತಾಪ ಸಭೆಯನ್ನು ನಡೆಸಲಾಯಿತು.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಕಾಲೇಜಿನ ಪ್ರಾಂಶುಪಾಲ ದೇವಿಚರಣ್ ರೈ ಎಂ ಮಾತನಾಡಿ, “ವರ್ಷಗಳ ಹಿಂದೆ ನೂರಾರು ಸಸಿಗಳನ್ನು ನೆಟ್ಟು ಪರಿಸರಕ್ಕೆ ಕೊಡುಗೆ ನೀಡಿರುವ ತಿಮ್ಮಕ್ಕನವರು ತಾವು ನೆಟ್ಟ ಸಾಲು ಸಸಿಗಳಿಂದಲೇ ಸಾಲು ಮರದ ತಿಮ್ಮಕ್ಕ ಎಂಬ ಹೆಸರು ಪಡೆದುಕೊಂಡರು. ಮುಂದಿನ ಪೀಳಿಗೆಯ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಗಿಡಗಳಿಗೆ ನೀರುಣಿಸಿ ಬೆಳೆಸಿದರು. ಅನಕ್ಷರಸ್ಥೆಯಾಗಿದ್ದರೂ ತಿಮ್ಮಕ್ಕ ಪರಿಸರ ಸಂರಕ್ಷಣೆಯಲ್ಲಿ ಮಹತ್ಕಾರ್ಯ ಮಾಡಿದರು. ಸಾಧನೆ ಮಾಡಲು ಯಾವುದೇ ಪದವಿ, ನೆರವು, ಅವಕಾಶದ ಅಗತ್ಯವಿಲ್ಲ. ಕಾಯಕನಿಷ್ಠೆ ಇರಿಸಿಕೊಂಡು ಸರ್ವರಿಗೂ ಒಳಿತನ್ನು ಬಯಸುವ ಮೂಲಕ ಜಗತ್ತನ್ನೇ ಬದಲಾವಣೆ ಮಾಡುವ ಶಕ್ತಿ ಆಗಬಹುದು ಎಂಬುದಕ್ಕೆ ತಿಮ್ಮಕ್ಕ ನಿದರ್ಶನವಾಗಿದ್ದಾರೆ” ಎಂದು ನುಡಿದರು.

ಈ ಸಂದರ್ಭದಲ್ಲಿ ಕಾಲೇಜಿನ ಉಪನ್ಯಾಸಕ – ಉಪನ್ಯಾಸಕೇತರ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದು ಅವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಅಗಲಿದ ದಿವ್ಯ ಚೇತನಕ್ಕೆ ಸಂತಾಪವನ್ನು ಸೂಚಿದರು.

LEAVE A REPLY

Please enter your comment!
Please enter your name here