





ನಶಮುಕ್ತ ಸಮಾಜದ ನಿರ್ಮಾಣ ಮಾಡುವಲ್ಲಿ ವಿದ್ಯಾರ್ಥಿಗಳ ಪಾತ್ರ ಪ್ರಮುಖವಾದದ್ದು- ಗಣೇಶ್ ಆಚಾರ್ಯ


ಕಡಬ: ವಿಶ್ವ ಹಿಂದೂ ಪರಿಷತ್ ಬಜರಂಗದಳ ಕಡಬ ಪ್ರಖಂಡ ಇದರ ವತಿಯಿಂದ ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ನಶಮುಕ್ತ ಯುವ ಸಮಾಜ ಮಾಹಿತಿ ಕಾರ್ಯಾಗಾರ ನ.17 ರಂದು ಹನುಮಾನ್ ನಗರದ ಯಾದವಶ್ರೀ ಸಭಾಂಗಣದಲ್ಲಿ ನಡೆಯಿತು.





ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಶ್ವಹಿಂದೂ ಪರಿಷತ್ ಕಡಬ ಪ್ರಖಂಡದ ಅಧ್ಯಕ್ಷ ಶಿವರಾಮ ಶೆಟ್ಟಿ ಕೇಪು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕಡಬ ಆರಕ್ಷಕ ಠಾಣೆಯ ಎ.ಎಸ್.ಐ. ಶಿವರಾಮ ಆಗಮಿಸಿ, ವಿದ್ಯಾರ್ಥಿಗಳಿಗೆ ಮಾದಕ ವ್ಯಸನ, ಪೋಕ್ಸೋ ಕಾನೂನುಗಳ ಮಾಹಿತಿ ನೀಡಿದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಕರಾವಳಿ ಪ್ರಾದೇಶಿಕ ವಿಭಾಗದ ಜನಜಾಗೃತಿ ಯೋಜನಾಧಿಕಾರಿ ಗಣೇಶ್ ಆಚಾರ್ಯ ವಿದ್ಯಾರ್ಥಿಗಳಿಗೆ ಏಳು ವ್ಯಸನಗಳ ಕುರಿತು ನಿದರ್ಶನಗಳನ್ನು ಹೇಳುತ್ತಾ, ಸ್ವತಃ ತಮ್ಮ ಜೀವನದಲ್ಲಿ ನಡೆದ ಘಟನೆಗಳನ್ನು ತಿಳಿಸಿ ವಿದ್ಯಾರ್ಥಿಗಳು ಭವಿ?ದಲ್ಲಿ ಉತ್ತಮ ಜೀವನವನ್ನು ನಡೆಸಬೇಕಾದರೆ ವ್ಯಸನದಿಂದ ದೂರವಿರಿ ಎಂದು ಕಿವಿಮಾತು ಹೇಳಿದರು. ವೇದಿಕೆಯಲ್ಲಿ ಸರಸ್ವತೀ ವಿದ್ಯಾಲಯದ ಸಂಚಾಲಕಿ ಸವಿತಾ ಶಿವಸುಬ್ರಹ್ಮಣ್ಯ ಭಟ್, ಮುಖ್ಯ ಶಿಕ್ಷಕಿ ಶೈಲಶ್ರೀ ರೈ ಎಸ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ವಿಶ್ವ ಹಿಂದೂ ಪರಿಷತ್ ಕಡಬ ಪ್ರಖಂಡದ ಕಾರ್ಯದರ್ಶಿ ಪ್ರಮೀಳಾ ಲೋಕೇಶ್, ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲಾ ಸಹ ಕಾರ್ಯದರ್ಶಿ ಪ್ರಮೋದ್ ರೈ ನಂದುಗುರಿ, ಕಡಬ ಪೊಲೀಸ್ ಠಾಣೆ ಸಿಬ್ಬಂದಿ ಮಹೇಶ್, ಬಜರಂಗದಳ ಪ್ರಖಂಡ ಸಹ ಸಂಯೋಜಕರಾದ ರಕ್ಷಿತ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಹರಿಪ್ರಿಯಾ ಹರಿದಾಸ್ ಪ್ರಾರ್ಥಿಸಿ, ಬಜರಂಗದಳ ಕಡಬ ಪ್ರಖಂಡದ ಸಂಯೋಜಕರಾದ ಅಶ್ವಿತ್ ಕಂಡಿಗ ಸ್ವಾಗತಿಸಿದರು. ಸಂಪನ್ಮೂಲ ವ್ಯಕ್ತಿಯನ್ನು ಶಿಕ್ಷಕಿ ಸೌಮ್ಯ.ಕೆ.ಎ. ಸಭೆಗೆ ಪರಿಚಯಿಸಿದರು. ವಿಶ್ವ ಹಿಂದೂ ಪರಿಷತ್ ಸತ್ಸಂಗ ಪ್ರಮುಖ್ ಕಡಬ ಪ್ರಖಂಡ ಸುಕೇಶ್ ಕುಮಾರ್ ರೈ ವಂದಿಸಿ, ಶಿಕ್ಷಕಿ ದೀಕ್ಷಿತಾ.ಕೆ. ಕಾರ್ಯಕ್ರಮ ನಿರೂಪಿಸಿದರು.










