ಪುತ್ತೂರು: ಮಾದಕ ವಸ್ತು ಮಾರಾಟ ಜಾಲದ ವಿರುದ್ಧ ಪುತ್ತೂರು ಪೊಲೀಸರ ಕಾರ್ಯಾಚರಣೆ ನಡೆಯುತ್ತಿದ್ದು, ಪುತ್ತೂರಿನಲ್ಲಿ ಬಾಡಿಗೆ ಮನೆಯಲ್ಲಿ ಅಕ್ರಮವಾಗಿ ಎಂಡಿಎಂಎ ಇರಿಸಿಕೊಂಡಿದ್ದ ಆರೋಪಿಯನ್ನು ಬಂಧಿಸಿ, ಆತನಿಂದ ಎಂಡಿಎಂಎ ವಶಕ್ಕೆ ಪಡೆದುಕೊಂಡಿದ್ದಾರೆ.
ಕಬಕ ವಿದ್ಯಾಪುರ ನಿವಾಸಿಯಾಗಿದ್ದು ಮುಕ್ರಂಪಾಡಿ ಸಮೀಪ ಬಾಡಿಗೆ ಕೊಠಡಿಯಲ್ಲಿರುವ ಮುಸ್ತಾಫ ಬಂಧಿತ ಆರೋಪಿ.ಆರೋಪಿಯಿಂದ 15 ಗ್ರಾಂ ಎಂಡಿಎಂಎ ವಶಕ್ಕೆ ಪಡೆದುಕೊಳ್ಳಲಾಗಿದೆ. ಆರೋಪಿ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಮಾದಕವಸ್ತು ಇರಿಸಿಕೊಂಡ ಕುರಿತು ಎರಡು ಪ್ರಕರಣ ದಾಖಲಾಗಿದೆ.ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು,ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
