ಸ.ಹಿ.ಪ್ರಾ ಶಾಲೆ ಸಾಮೆತ್ತಡ್ಕದಲ್ಲಿ ಪೋಷಕ ಮಹಾ ಸಭೆ ಹಾಗೂ ಮಕ್ಕಳ ದಿನಾಚರಣೆ

0

ಪುತ್ತೂರು: ಸ. ಹಿ. ಪ್ರಾ ಶಾಲೆ ಸಾಮೆತ್ತಡ್ಕದಲ್ಲಿ “ಪೋಷಕ ಮಹಾ ಸಭೆ ಹಾಗೂ ಮಕ್ಕಳ ದಿನಾಚರಣೆ ನಡೆಯಿತು.

ಪುಟಾಣಿ ಮಕ್ಕಳು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಯ ಕ್ರಮದಲ್ಲಿ ಶಾಲೆಯ ಸ್ಥಾಪಕಾಧ್ಯಕ್ಷರು ಹಾಗೂ “ನಮ್ಮ ಶಾಲೆ ಸಾಮೆತ್ತಡ್ಕ ” ಚಾರಿಟೇಬಲ್ ಟ್ರಸ್ಟ್ (ರಿ) ಅಧ್ಯಕ್ಷ ಗೋಪಾಕೃಷ್ಣ ಭಟ್, ಎಸ್.ಡಿ.ಎಂ.ಸಿ ಅಧ್ಯಕ್ಷರಾಗಿರುವ ಶಿವಪ್ರಸಾದ್ ಕೆಮ್ಮಿಂಜೆ, ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ಇದರ ಅಧ್ಯಕ್ಷರಾದ ವೇದಾವತಿ, ಕಾರ್ಯದರ್ಶಿ ಅನುಸೂಯ, ಲಯನ್ಸ್ ಕ್ಲಬ್ ಪ್ರತಿನಿಧಿಗಳಾದ ಕರ್ನಾಟಕ ರಾಜ್ಯೋತ್ಸವದ ರಾಜ್ಯ ಪ್ರಶಸ್ತಿ ವಿಜೇತರಾದ ಅಬೂಬಕ್ಕರ್ ಮೂಲಾರ್, ಅಬ್ದುಲ್ ರಜಾಕ್ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಸರಸ್ವತಿ ಬ್ಯಾಂಕ್ ಉದ್ಯೋಗಿ ಹಾಗೂ ಪೋಷಕರಾದ ಬಿಪಿನ್ ಚಂದ್ರ, ಇನ್ನೊರ್ವ ಸಂಪನ್ಮೂಲ ವ್ಯಕ್ತಿ ಶ್ರೀ ಕೃಷ್ಣ ಪ್ರಸಾದ್, ಅನಿಕೇತನ ಲಾಯರ್ ಚೇಬರ್ ಪ್ರತಿನಿಧಿ ಇವರು ಪೋಷಕರಿಗೆ “ಮಕ್ಕಳ ಹಕ್ಕುಗಳು, ಪೋಕ್ಸೋ ಕಾಯಿದೆ ಹಾಗೂ ಮಕ್ಕಳ ಶಿಕ್ಷಣದ ಬಗ್ಗೆ ಪೋಷಕರ ಪಾತ್ರದ ಮಾಹಿತಿಯನ್ನು ನೀಡಿದರು.

ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ ಉಪಾಧ್ಯಕ್ಷರು ಸದಸ್ಯರು, ಪೋಷಕರು,ಶಿಕ್ಷಕರು ಉಪಸ್ಥಿತರಿದ್ದರು. ನಂತರ ಪೋಷಕರಿಗೆ ಹಾಗೂ ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು . ಕಾರ್ಯಕ್ರಮವು 15/11/2025 ರ ಶನಿವಾರ ತನಕ ಮುಂದುವರಿದು ಸಂಜೆ 3:00 ಗಂಟೆಗೆ ಸಮಾರೋಪ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಶಾಲೆಯ ಸ್ಥಾಪಕ ಅಧ್ಯಕ್ಷರು ಹಾಗೂ ನಮ್ಮ ಶಾಲೆ ಸಾಮೆತ್ತಡ್ಕ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಗೋಪಾಲ ಕೃಷ್ಣ ಭಟ್, ಟ್ರಸ್ಟ್ ಕಾರ್ಯಧ್ಯಕ್ಷರಾದ ವೆಂಕಟ್ ರಾಜ್, ಟ್ರಸ್ಟಿ ರವೀಂದ್ರ ಹೆಗ್ಡೆ, ಟ್ರಸ್ಟ್ ಕಾರ್ಯದರ್ಶಿ ಇಂದಿವರ್ ಭಟ್, ಟ್ರಸ್ಟಿ ಮೊಹಮ್ಮದ್ ಫಾಹಿಝ್ ಹಾಗೂ ಎಸ್.ಡಿ.ಎಂ.ಸಿ ಅಧ್ಯಕ್ಷ ಶಿವಪ್ರಸಾದ್ ಕೆಮ್ಮಿಂಜೆ, ಶಿಕ್ಷಣ ತಜ್ಞರಾಗಿರುವ ದಿನೇಶ್ ಕಾಮತ್ ಇವರುಗಳು ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಪ್ರಭಾರ ಮುಖ್ಯ ಶಿಕ್ಷಕಿ ಮರಿಯಾ ಅಶ್ರಫ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಎಲ್ಲಾ ಶಿಕ್ಷಕರು ಸಹಕರಿಸಿದರು.

LEAVE A REPLY

Please enter your comment!
Please enter your name here