





ಪುತ್ತೂರು: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ದ.ಕ ಜಿಲ್ಲೆ ಸಹಯೋಗದಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಆಯೋಜಿಸುವ ಪದವಿ ಪೂರ್ವ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳು ನ.20 ರಂದು ಕಾಲೇಜಿನ ಬೆಳ್ಳಿ ಹಬ್ಬ ಸಭಾಂಗಣದಲ್ಲಿ ನಡೆಯಲಿದೆ.


ಕಾರ್ಯಕ್ರಮದ ಉದ್ಘಾಟಕರಾಗಿ ದ.ಕ ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಉಪನಿರ್ದೇಶಕಿ ರಾಜೇಶ್ವರಿ ಹೆಚ್. ಹೆಚ್ ಭಾಗವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಎಸ್. ಎಸ್ ಪದವಿ ಪೂರ್ವ ಕಾಲೇಜು ಸುಬ್ರಹ್ಮಣ್ಯ ಇಲ್ಲಿನ ಪ್ರಾಂಶುಪಾಲ ಸೋಮಶೇಖರ್ ನಾಯಕ್ ಹಾಗೂ ಘನ ಉಪಸ್ಥಿತಿಯಲ್ಲಿ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಜೆರಾಲ್ಡ್ ಡಿ ಕೋಸ್ಟಾ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಡಾ. ಪ್ರಕಾಶ್. ಬಿ ಹಾಗೂ ಕಾಲೇಜಿನ ರಕ್ಷಕ- ಶಿಕ್ಷಕ ಸಂಘದ ಉಪಾಧ್ಯಕ್ಷರಾದ ದಿವ್ಯಾ ಅನಿಲ್ ರೈ ವಹಿಸಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಯಿದೆ ದೇವುಸ್ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ರೆ.ಫಾ. ಲಾರೆನ್ಸ್ ಮಸ್ಕರೇನಸ್ ವಹಿಸಲಿದ್ದಾರೆ. ಅದೇ ರೀತಿ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ದೇವಿ ಚರಣ್ ರೈ ವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.













