ಕಾಣಿಯೂರು: ದೇಶ ಕಂಡ ಅಪ್ರತಿಮ ರಾಜಕಾರಣಿ, ಮಾಜಿ ಪ್ರಧಾನಿ ಭಾರತರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮಶತಾಬ್ದಿ ಪ್ರಯುಕ್ತ ಪುತ್ತೂರಿನಲ್ಲಿ ನ19ರಂದು ನಡೆದ ಅಟಲ್ ವಿರಾಸತ್ ಕಾರ್ಯಕ್ರಮಕ್ಕೆ ಕಾಣಿಯೂರಿನಿಂದ ಹಲವಾರು ಮಂದಿ ಭಾಗಿಯಾದರು.
ಸುಳ್ಯ ಬಿಜೆಪಿ ಮಂಡಲ ಸಮಿತಿ ಕಾರ್ಯದರ್ಶಿ ಗಣೇಶ್ ಉದನಡ್ಕ, ಕಾಣಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷ ವಿಶ್ವನಾಥ ಕೊಪ್ಪ, ಕಾಣಿಯೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಸುರೇಶ್ ಓಡಬಾಯಿ ಸೇರಿದಂತೆ ಹಲವಾರು ಮಂದಿ ಭಾಗವಹಿಸಿದ್ದರು.
