





ಪುತ್ತೂರು: ಪುತ್ತೂರು ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ ಶಿಹಾಬ್ ನೆಯ್ಯಡ್ಕ ರವರನ್ನು ನೇಮಕ ಮಾಡಿ ಆದೇಶಿಸಲಾಗಿದೆ.


ದಕ್ಷಿಣ ಕನ್ನಡ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಾಹುಲ್ ಹಮೀದ್ ರವರ ಆದೇಶದ ಮೇರೆಗೆ ಶಾಸಕ ಅಶೋಕ್ ಕುಮಾರ್ ರೈ ಹಾಗೂ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ರವರ ಶಿಫಾರಸಿನ ಮೇರೆಗೆ ಪುತ್ತೂರು ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಹಾಜಿ.ಅಬ್ದುಲ್ ರಹೀಮಾನ್ ಆಜಾದ್ ರವರು ನೇಮಕ ಮಾಡಿ ಆದೇಶಿಸಿದ್ದಾರೆ. ಶಾಸಕ ಅಶೋಕ್ ಕುಮಾರ್ ರೈ ಯವರು ಶಿಹಾಬ್ ನೆಯ್ಯಡ್ಕ ರವರಿಗೆ ಆದೇಶ ಪತ್ರ ನೀಡಿ ಶುಭ ಹಾರೈಸಿದರು.





ಈ ಸಂದರ್ಭದಲ್ಲಿ ಹಲವಾರು ಮಂದಿ ಉಪಸಿತರಿದ್ದರು. ಶಿಹಾಬ್ ನೆಯ್ಯಡ್ಕರವರು ಪುದಿಯಾಬಳಪ್ಪು ಜಮಾಅತ್ ಕಮಿಟಿಯ ಕಾರ್ಯದರ್ಶಿಯಾಗಿ, ನೆಟ್ಟಣಿಗೆ ಮುಡ್ನೂರು ವಲಯ ಪ್ರಧಾನ ಕಾರ್ಯದರ್ಶಿ ಸೇರಿದಂತೆ ಹಲವಾರು ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.










