ಪುತ್ತೂರು: ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ವತಿಯಿಂದ ಮಾಜಿ ಮಹಿಳಾ ಪ್ರಧಾನ ಮಂತ್ರಿ, ಉಕ್ಕಿನ ಮಹಿಳೆ ಇಂದಿರಾ ಗಾಂಧಿ ಅವರ 108ನೇ ಜಯಂತಿಯನ್ನು ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಆಚರಿಸಲಾಯಿತು.

ಪುತ್ತೂರು ಮಹಿಳಾ ಕಾಂಗ್ರೆಸ್ ಘಟಕದ ಕಾರ್ಯಾಧ್ಯಕ್ಷೆ ಚಂದ್ರಪ್ರಪ್ರಭಾ ಗೌಡ, ಗ್ಯಾರಂಟಿ ಸಮಿತಿ ಸದಸ್ಯ ಸಂತೋಷ್ ಭಂಡಾರಿ ಚಿಲ್ಮೆತ್ತಾರು, ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಸಿರಿಲ್, ಮಹಿಳಾ ಕಾಂಗ್ರೆಸ್ ಘಟಕದ ಉಪಾಧ್ಯಕ್ಷರಾದ ಸಾಹಿರಾ ಬನ್ನೂರ, ಧರಣಿ ಕೆಯ್ಯೂರು, ಬದ್ರುನ್ನೀಸಾ ಪರ್ಪುಂಜ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿಗಳಾದ ಚಂದ್ರಕಲಾ ಮುಕ್ವೆ, ಪೂರ್ಣಿಮಾ ರೈ ಆರ್ಯಾಪು, ನೆಬಿಸಾ ಬಪ್ಪಳಿಗೆ ಸೇರಿದಂತೆ ಹಲವು ಮಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.