ಮುಕ್ರಂಪಾಡಿ ಬಾಲಕಿಯರ ಸ.ಪ.ಪೂರ್ವ ಕಾಲೇಜಿನಲ್ಲಿ ಶಿಕ್ಷಕ-ರಕ್ಷಕ-ಅಭಿವೃದ್ಧಿ ಸಮಿತಿಯ ಮಹಾಸಭೆ

0

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ಮುಕ್ರಂಪಾಡಿ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು ವತಿಯಿಂದ ಏರ್ಪಡಿಸಿದ್ದ ಶಿಕ್ಷಕ-ರಕ್ಷಕ ಮಹಾಸಭೆ ಯನ್ನು ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷೆ ಮಲ್ಲಿಕ ಜೆ.ರೆ ರವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಉಪನ್ಯಾಸಕರೊಂದಿಗೆ ಪೋಷಕರ ಜವಾಬ್ದಾರಿ ತುಂಬಾ ಮಹತ್ವದ್ದಾಗಿದೆ ಎಂದರು.

ಪ್ರಾಂಶುಪಾಲೆ ಪ್ರಮೀಳ ಜೆಸ್ಸಿ ಕ್ರಾಸ್ತಾ ಮಾತನಾಡಿ ಎಲ್ಲಾ ಸರಕಾರಿ ಕಾಲೇಜುಗಳಲ್ಲಿ ಪ್ರತಿಭಾವಂತ ಉಪನ್ಯಾಸಕರಿದ್ದಾರೆ. ಸರಕಾರ ಎಲ್ಲ ರಿತೀಯ ಮೂಲ ಸೌಕರ್ಯವನ್ನು ಒದಗಿಸುತ್ತಿದೆ. ಅತೀ ಕಡಿಮೆ ಶುಲ್ಕದಲ್ಲಿ ಸರಕಾರಿ ಕಾಲೇಜುಗಳಲ್ಲಿ ದೊರೆಯುವ ಉತ್ತಮ ಸೌಲಭ್ಯಗಳನ್ನು ಸದುಪಯೋಗ ಪಡೆದುಕೊಳ್ಳಬೇಕು. ಪೋಷಕರು ನಮ್ಮ ಕಾಲೇಜು ನಮ್ಮ ಜವಾಬ್ದಾರಿ ಎಂಬುದನ್ನು ಮನಗಾಣ ಬೇಕು ಎಂದರು.

ಸಭೆಯಲ್ಲಿ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾದ ವಿಷ್ಣು ಭಟ್, ಜೆರೋಮಿಯ ಪಾಯಸ್ ಮತ್ತು ಅಬ್ದುಲ್ ಅಜೀಜ್ ಹಾಜರಿದ್ದರು. ಕನ್ನಡ ಉಪನ್ಯಾಸಕ ಭೋಜರಾಜ ಆಚಾರಿ ಕಾರ್ಯಕ್ರಮ ನಿರೂಪಿಸಿದರು. ಕು. ಶೈನಿ ಮತ್ತು ಕು.ರಂಜಿನಿ ಪ್ರಾರ್ಥಿಸಿದರು. ಅದೇ ದಿನ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ವಾರ್ಷಿಕ ಕ್ರೀಡಾಕೂಟ ಮತ್ತು ಮಕ್ಕಳ ದಿನಾಚರಣೆಯ ಸಂಭ್ರಮ ನಡೆಯಿತು. ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯ ಮಲ್ಲಿಕ ಜೆ.ರೈ ರವರು ಕ್ರೀಡಾ ಧ್ವಜಾರೋಹಣ ಮಾಡಿ ಮಕ್ಕಳಿಗೆ ಶುಭ ಹಾರೈಸಿದರು. ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾದ ವಿಶ್ರಾಂತ ಉಪ ಪ್ರಾಂಶುಪಾಲ ಪ್ರೋ. ವಿಷ್ಣು ಭಟ್ ವಿದ್ಯಾರ್ಥಿನಿಯರಿಗರ ಸಂದೇಶ ನೀಡಿ ರಾಷ್ಟ್ರ ನಿರ್ಮಾಣದಲ್ಲಿ ಯುವತಿಯರು ಪ್ರಮುಖ ಪಾತ್ರ ವಹಿಸಲು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರು, ಪೋಷಕರು, ಉಪನ್ಯಾಸಕರು ಮತ್ತು ವಿದ್ಯಾರ್ಥಿನಿಯರು ಭಾಗವಹಿಸಿದರು. ಕಾಲೇಜಿನಲ್ಲಿ ಆಟದ ಮೈದಾನ ಇಲ್ಲದೇ ಇರುವುದರಿಂದ ಕಾಲೇಜಿನ ಪಕ್ಕದ ಖಾಲಿ ಜಾಗದಲ್ಲಿ ಚಿತ್ರಲೇಖ ಮತ್ತು ದಾಮೋದರ ಇವರ ಮುಂದಾಳತ್ಯದಲ್ಲಿ ಎಲ್ಲಾ ಉಪನ್ಯಾಸಕರ ಸಹಕಾರದೊಂದಿಗೆ ಆಟೋಟ ಸ್ಪರ್ಧೆಗಳನ್ನು ನಡೆಸಲಾಯಿತು. ಕಾಲೇಜಿನ ಉಪನ್ಯಾಸಕರ ವತಿಯಿಂದ ವಿದ್ಯಾರ್ಥಿನಿಯರಿಗೆ ಲಘು ಉಪಹಾರದ ವ್ಯವಸ್ಥೆ ಮಾಡಲಾಗಿತ್ತು.

LEAVE A REPLY

Please enter your comment!
Please enter your name here