ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನ.21ರಂದು ಸಂಜೆ ಗಂಟೆ 4.30ಕ್ಕೆ ಲಲಿತಾ ಸಹಸ್ರನಾಮ ಪಠಣದೊಂದಿಗೆ ಮಹಿಳೆಯರಿಂದ ಸಾಮೂಹಿಕ ಕುಂಕುಮಾರ್ಚನೆ ನಡೆಯಲಿದೆ.
ಕುಂಕುಮಾರ್ಚನೆ ಮಾಡುವ ಮಹಿಳೆಯರು ಎರಡು ಸಣ್ಣ ಹರಿವಾಣ, ನಾಣ್ಯ, ಲಲಿತ ಸಹಸ್ರನಾಮ ಪುಸ್ತಕ ತರುವಂತೆ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಮತ್ತು ಕಾರ್ಯದರ್ಶಿ ಕೆ.ವಿ.ಶ್ರೀನಿವಾಸ್ ತಿಳಿಸಿದ್ದಾರೆ.
