





ಪುತ್ತೂರು: ಕರ್ನಾಟಕ ಸರಕಾರ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ದಕ್ಷಿಣ ಕನ್ನಡ, ಉಪನಿರ್ದೇಶಕರ ಕಛೇರಿ ಮಂಗಳೂರು, ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಮತ್ತು ಸರಕಾರಿ ಪದವಿ ಪೂರ್ವ ಕಾಲೇಜ್ ಪಂಜ ಇವರ ಜಂಟಿ ಆಶ್ರಯದಲ್ಲಿ ಕೋಟಿ ಚೆನ್ನಯ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಸಂತ ಫಿಲೋಮಿನಾ ಪ್ರೌಢಶಾಲಾ ವಿದ್ಯಾರ್ಥಿ ಮೊಹಮ್ಮದ್ ಸೂಫೈ ಇವನು ಎತ್ತರ ಜಿಗಿತದಲ್ಲಿ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.



ಪ್ರಿಯದರ್ಶಿನಿ ಪ್ರೌಢಶಾಲೆ ಬೆಟ್ಟಂಪಾಡಿ ಇಲ್ಲಿ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಎತ್ತರ ಜಿಗಿತದಲ್ಲಿ ನೂತನ ದಾಖಲೆಯನ್ನು ಮಾಡಿರುತ್ತಾರೆ. ಇವನು ಪುತ್ತೂರು ಬಪ್ಪಳಿಗೆ ನಿವಾಸಿ ಪಿ.ಎಂ ಇಸ್ಮಾಯಿಲ್ ಹಾಗೂ ಕಮರುನ್ನಿಸ ಇವರ ಪುತ್ರ. ಇವರನ್ನು ಶಾಲಾ ಸಂಚಾಲಕರು, ಆಡಳಿತ ಮಂಡಳಿ, ಮುಖ್ಯ ಗುರುಗಳು, ರಕ್ಷಕ ಶಿಕ್ಷಕ ಸಂಘ, ಹಿರಿಯ ವಿದ್ಯಾರ್ಥಿ ಸಂಘ, ಶಿಕ್ಷಕ ಶಿಕ್ಷಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿರುತ್ತಾರೆ. ಇವನು ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ ನರೇಶ್ ಲೋಬೋ ಮತ್ತು ಧನ್ಯಶ್ರೀ ಇವರಿಂದ ತರಬೇತಿಯನ್ನು ಪಡೆದಿರುತ್ತಾರೆ.












