ಪುತ್ತೂರು: ವೀರಮಂಗಲದ ಆನಾಜೆ ಶ್ರೀ ಮಹಾವಿಷ್ಣು ಸೇವಾ ಪ್ರತಿಷ್ಠಾನದ ರಜತ ಸಂಭ್ರಮದ ಆಮಂತ್ರಣ ಪತ್ರಿಕೆಯು ಇತ್ತೀಚೆಗೆ ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬಿಡುಗಡೆಗೊಂಡಿತು.
ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಅರ್ಚಕ ರಾಧಾಕೃಷ್ಣ ಶಗ್ರಿತ್ತಾಯ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಶುಭಹಾರೈಸಿದರು. ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಿಶ್ವಸ್ಥ ಮಂಡಳಿಯ ಅಧ್ಯಕ್ಷ ಉಮೇಶ್ ಕೋಡಿಬೈಲು, ಸಂಸ್ಥೆಯ ಹಿರಿಯ ಸದಸ್ಯ ಜಗನ್ನಾಥ ರೈ ಹೊಳರಾಡಿ, ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷೆ ಪವಿತ್ರ ಕೆ.ಪಿ. ಕೆದ್ಕಾರು ಹೊಸಮನೆ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವೀರಮಂಗಲ ಒಕ್ಕೂಟದ ಅಧ್ಯಕ್ಷ ಉಮೇಶ್ ಪೆಲತ್ತಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಚಿಂತನ ಹಾಗೂ ಅನನ್ಯ ಪ್ರಾರ್ಥಿಸಿದರು. ಯೋಗೀಶ್ ವೀರಮಂಗಲ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಹಾವಿಷ್ಣು ಸೇವಾ ಪ್ರತಿಷ್ಠಾನದ ಅಧ್ಯಕ್ಷ ಹರೀಶ್ ಆಚಾರ್ಯ ಸ್ವಾಗತಿಸಿದರು. ನಿರಂಜನ ಕುಲಾಲ್ ವಂದಿಸಿದರು. ವಿದ್ವಾನ್ ಗೋಪಾಲಕೃಷ್ಣ ವೀರಮಂಗಲ ಕಾರ್ಯಕ್ರಮ ನಿರೂಪಿಸಿದರು. ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
