





ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಕಡಬ ತಾಲೂಕು ಇದರ ಜ್ಞಾನ ವಿಕಾಸ ಕಾರ್ಯಕ್ರಮದಡಿ ಕೊಣಾಲು ಹೈಸ್ಕೂಲ್ ವಿದ್ಯಾರ್ಥಿಗಳಿಗೆ ೩ ತಿಂಗಳುಗಳ ಕಾಲ ನೀಡುವ ಉಚಿತ ಟ್ಯೂಷನ್ ಕ್ಲಾಸ್ ಉದ್ಘಾಟನೆ ನಡೆಯಿತು.


ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಪ್ರಕಾಶ್ ಕುಮಾರ್ ಉದ್ಘಾಟಿಸಿ ಮಾತನಾಡಿ, ಜ್ಞಾನವಿಕಾಸ ಕಾರ್ಯಕ್ರಮದ ಉದ್ದೇಶಗಳು ಹಾಗೂ ಉಚಿತ ಟ್ಯೂಷನ್ ಕ್ಲಾಸಿನಿಂದಾಗುವ ಪ್ರಯೋಜನಗಳ ಬಗ್ಗೆ ಮಾಹಿತಿ, ಮಾರ್ಗದರ್ಶನ ನೀಡಿದರು. ಮುಖ್ಯ ಶಿಕ್ಷಕರಾದ ಶಶಿಧರ್ರವರು ಯೋಜನೆಯ ಮೂಲಕ ಸಿಕ್ಕಿರುವ ಈ ಅವಕಾಶವನ್ನು ಎಲ್ಲಾ ಮಕ್ಕಳು ಸದುಪಯೋಗ ಪಡಿಸಿಕೊಳ್ಳುವಂತೆ ಹೇಳಿದರು. ಎಸ್ಡಿಎಂಸಿ ಅಧ್ಯಕ್ಷ ಕಮಲಾಕ್ಷ ಪಂಡಿತ್ ಅಧ್ಯಕ್ಷತೆ ವಹಿಸಿದ್ದರು.





ಒಕ್ಕೂಟದ ಅಧ್ಯಕ್ಷರಾದ ಲಿತಿನ್ ಕುಮಾರ್, ತರಬೇತಿ ನೀಡುವ ಶಿಕ್ಷಕಿ ಸಂಧ್ಯಾ, ಶಾಲಾ ಸಹ ಶಿಕ್ಷಕರು ಉಪಸ್ಥಿತರಿದ್ದರು. ಜ್ಞಾನವಿಕಾಸ ಸಮನ್ವಯಾಧಿಕಾರಿ ಚೇತನ ಜಿ. ಕಾರ್ಯಕ್ರಮ ನಿರೂಪಿಸಿದರು. ಕೊಣಾಲು ಸೇವಾ ಪ್ರತಿನಿಧಿ ಪ್ರತಿಮಾ ಸ್ವಾಗತಿಸಿದರು. ಗೋಳಿತ್ತೊಟ್ಟು ವಲಯ ಮೇಲ್ವಿಚಾರಕಿ ಜಯಶ್ರೀ ವಂದಿಸಿದರು. ಶಾಲೆಯ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.









